December 22, 2024

Bhavana Tv

Its Your Channel

ಗುಂಡ್ಲುಪೇಟೆ ಕನ್ನಡ ಸಾಹಿತ್ಯ ಪರಿಷತ್ ನಿಂದ ಕ್ಷೇತ್ರದ ಜನಪ್ರಿಯ ಶಾಸಕ ಸಿಎಸ್ ನಿರಂಜನ್ ಕುಮಾರ್ ರವರಿಗೆ ಸನ್ಮಾನ

ಗುಂಡ್ಲುಪೇಟೆ :– ಕನ್ನಡ ಸಾಹಿತ್ಯ ಪರಿಷತ್ತಿನ ನಿಯೋಗವು ಗುಂಡ್ಲುಪೇಟೆ ತಾಲೂಕು ಘಟಕದ ವತಿಯಿಂದ ಕ್ಷೇತ್ರದ ಜನಪ್ರಿಯ ಶಾಸಕರಾದ ಸಿಎಸ್ ನಿರಂಜನ್ ಕುಮಾರ್ ಅವರಿಗೆ ಸನ್ಮಾನ ಮಾಡುವುದರ ಮೂಲಕ ತಾಲೂಕು ನೂತನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಜಗತ್ ಪ್ರಕಾಶ್ ರವರು ಹಾಗೂ ಜಿಲ್ಲಾ ಅಧ್ಯಕ್ಷರಾದ ಎಂ ಶೈಲ ಕುಮಾರ್ ಅವರು ಪದಾಧಿಕಾರಿಗಳ ಜೊತೆಗೂಡಿ ಪಟ್ಟಣದಲ್ಲಿ ಕನ್ನಡ ಭವನಕ್ಕೆ ಸ್ಥಳ ನೀಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾವಲುಪಡೆಯ ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಮಾಲಿಕ್ ಮಾತನಾಡಿ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಕನ್ನಡಭವನ ನಿರ್ಮಿಸಿಲ್ಲ ಆದ್ದರಿಂದ ತುರ್ತಾಗಿ ಅತಿಶೀಘ್ರದಲ್ಲೇ ಕನ್ನಡ ಭವನ ನಿರ್ಮಿಸಬೇಕು ಎಂದು ಮನವಿ ಮಾಡಿದರು. ಕಾವಲುಪಡೆಯ ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಮಾಲಿಕ್, ಕಾರ್ಯದರ್ಶಿಗಳಾದ ಎಸ್ ಮುಬಾರಕ್, ಸುಭಾಷ್ ಮಾಡ್ರಳ್ಳಿ, ಸೋಮಣ್ಣ, ವೆಂಕಟೇಶ್ ಗೌಡ್ರು, ಇನ್ನು ಹಲವಾರು ಪದಾಧಿಕಾರಿಗಳು ಹಾಜರಿದ್ದರು

ವರದಿ: ಸದಾನಂದ ಕಣ್ಣೆಗಾಲ

error: