
ಭಟ್ಕಳ: ಚೆನ್ನಪಟ್ಟಣ ಹನುಮಂತ ದೇವರ ರಥೋತ್ಸವಕ್ಕೆ ಯುಗಾದಿಯ ಮಾರನೆಯ ದಿನದಂದು ವಿವಿಧ ಧಾರ್ಮಿಕ ವಿಧಿ ವಿದಾನಗಳೊಂದಿಗೆ ಗರುಡನ ಪಟವನ್ನು ಧ್ವಜಸ್ತಂಭಕ್ಕೆ ಕಟ್ಟುವ ಮೂಲಕ ಚಾಲನೆ ನೀಡಲಾಗಿತ್ತು. ಪ್ರತಿ ದಿನವೂ ಕೂಡಾ ಒಂದೊAದು ಉತ್ಸವವ ನಡೆದು, ಸಪ್ತಮಿ ಹಾಗೂ ಅಷ್ಟಮಿಯಂದು ಹೂವಿನ ರಥೋತ್ಸವ ನಡೆಯಿತು. ರಾಮನವಮಿಯಂದು ಬೆಳಿಗ್ಗೆ ದೇವರು ರಥಾರೋಹಣ ಮಾಡುವ ಮೂಲಕ ಬೆಳಿಗ್ಗೆ ರಥೋತ್ಸವಕ್ಕೆ ಚಾಲನೆ ನೀಡಲಾಗಿದ್ದು ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರಗಳ ನಡುವೆ ರಥೋತ್ಸವ ನಡೆಯಿತು.
ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರು ರಥೋತ್ಸವದ ಕಾರ್ಯಗಳು ಸಾಂಗವಾಗಿ ನೆರವೇರುವಂತೆ ನೋಡಿಕೊಂಡರು. ದೇವಸ್ಥಾನದ ರಥೋತ್ಸವ ಕಾರ್ಯದ ಧಾರ್ಮಿಕ ವಿಧಿ ವಿದಾನಗಳನ್ನು ವೇ.ಮೂ. ರಮಾನಂದ ಅವಭೃತ ಅವರ ನೇತೃತ್ವದ ಅರ್ಚಕರ ತಂಡ ನೆರವೇರಿಸಿದರು. ದೇವಸ್ಥಾನದ ಅರ್ಚಕ ವಿನಾಯಕ ಭಟ್ಟ ಅವರು ದೇವರ ಪೂಜಾ ಕಾರ್ಯಗಳನ್ನು ನೆರವೇರಿಸಿದರು.
ರಥೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಸುನಿಲ ನಾಯ್ಕ, ಮಾಜಿ ಶಾಸಕ ಮಂಕಾಳ ಎಸ್. ವೈದ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀಧರ ಮೊಗೇರ, ಶಿವರಾಮ ನಾಯ್ಕ, ನಾಗೇಶ ಪೈ, ಪ್ರಮುಖರಾದ ವಸಂತ ಖಾರ್ವಿ, ಸುರೇಂದ್ರ ಭಟ್ಕಳ, ಗೋವಿಂದ ನಾಯ್ಕ, ರಾಜೇಶ ನಾಯ್ಕ, ಈಶ್ವರ ಎನ್. ನಾಯ್ಕ, ಎಂ.ಆರ್. ನಾಯ್ಕ, ಕೃಷ್ಣಾ ನಾಯ್ಕ ಆಸರಕೇರಿ, ರಘುವೀರ ಬಾಳ್ಗಿ, ಶಾಂತಾರಾಮ ಭಟ್ಕಳ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜಾತ್ರೆಯ ಪ್ರಯುಕ್ತ ಬಂದೋಬಸ್ತಿಗಾಗಿ ಹೆಚ್ಚುವರಿ ಎಸ್.ಪಿ. ಬದರೀನಾಥ, ಡಿ.ವೈ.ಎಸ್.ಪಿ. ಕೆ.ಯು. ಬೆಳ್ಳಿಯಪ್ಪ, ಅರವಿಂದ ಕಲಗುಜ್ಜಿ, ನಗರ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ದಿವಾಕರ ಪಿ.ಎಂ., ಗ್ರಾಮೀಣ ಸರ್ಕಲ್ ಇನ್ಸಪೆಕ್ಟರ್ ಮಹಾಬಲೇಶ್ವರ ನಾಯ್ಕ, ವಿವಿಧ ಭಾಗಗಳಿಂದ ಆಗಮಿಸಿದ ಸರ್ಕಲ್ ಇನ್ಸಪೆಕ್ಟರ್ಗಳು, ಸಬ್ ಇನ್ಸಪೆಕ್ಟರ್ಗಳು ಹಾಗೂ ಸಿಬ್ಬಂದಿಗಳು ಬಂದೋಬಸ್ತ ಕಾರ್ಯ ನೆರವೇರಿಸಿದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ