December 21, 2024

Bhavana Tv

Its Your Channel

2021-2022 ನೇ ಸಾಲಿನ ಏಳನೇ ವರ್ಗದ ವಿದ್ಯಾರ್ಥಿಗಳನ್ನು ಬೀಳ್ಕೊಡುಗೆ ಕಾರ್ಯಕ್ರಮ

ಬಾದಾಮಿ:- 2021-2022 ನೇ ಸಾಲಿನ ಏಳನೇ ವರ್ಗದ ವಿದ್ಯಾರ್ಥಿಗಳನ್ನು ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾರತ ದೇಶದ ಯುವ ವಿಜ್ಞಾನಿಯಾದಂತಹ ಡಾ||ರವಿ ಲಿಂ ಹಾದಿಮನಿ(ಯು.ಎಸ್) ಇವರನ್ನು ಸನ್ಮಾನಿಸಲಾಯಿತು.

ಶ್ರೀ ರವಿ (ಮಹಾಗುಂಡಪ್ಪ).ಲಿA. ಹಾದಿಮನಿ ವಿಜ್ಞಾನಿ (ಫ್ರೋಫೆಸರ್ ಕಾಮನ್‌ವೆಲ್ತ್ ವಿಶ್ವವಿದ್ಯಾಲಯ ವರ್ಜೀನಿಯಾ ರಿಚ್ಮಂಡ್ ಯು ಎಸ್ ಎ) ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಜೀವನದಲ್ಲಿ ಗುರಿ ಇರಬೇಕು ಅದನ್ನು ಸಾಧಿಸುವ ಛಲ ಇರಬೇಕು. ಹೊಸದನ್ನು ಅವಿಸ್ಕರಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಹೇಳಿದರು. ತಂದೆ ತಾಯಿಯರ ಕಷ್ಟವನ್ನು ಅರಿತುಕೊಂಡು ಓದಿನ ಜೊತೆಗೆ ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯವಾದುದು ಎಂದು ತಿಳಿ ಹೇಳಿ ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗ ವನ್ನು ಉತ್ತಮವಾಗಿ ರೂಪಿಸಿಕೊಳ್ಳಿ ಎಂದು ಶುಭಕೋರಿದರು.

ಕಾರ್ಯಕ್ರಮದಲ್ಲಿ ಶಾಕಂಭರೀ ವಿದ್ಯಾನಿಕೇತನ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸರ್ವ ಶಿಕ್ಷಕ ಶಿಕ್ಷಕಿಯರು ಹಾಗೂ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

ವರದಿ:- ರಾಜೇಶ್.ಎಸ್ ದೇಸಾಯಿ ಬಾದಾಮಿ

error: