December 22, 2024

Bhavana Tv

Its Your Channel

ಸಂತೇಬಾಚಹಳ್ಳಿಯಲ್ಲಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ

ಕೃಷ್ಣರಾಜಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಎಸ್ ಬಿ ಹೆಚ್ ಸ್ಟೈಕರ್ ಕ್ರಿಕೆಟರ್ಸ್ ವತಿಯಿಂದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತು

ಪಂದ್ಯಾವಳಿಯ ಸಭಾ ಕಾರ್ಯಕ್ರಮವನ್ನು ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಹಾಗೂ ಜೆ.ಡಿ.ಎಸ್ ಪಕ್ಷದ ಯುವ ನಾಯಕ ಬಿ.ಎಂ ಕಿರಣ್ ರವರು ಉದ್ಘಾಟಿಸಿದರು

ನಂತರ ಬ್ಯಾಟಿಂಗ್ ಮಾಡುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಯುವಕರಲ್ಲಿ ಸ್ಪೂರ್ತಿ ನೀಡಿ ಮಾತನಾಡಿ ಅವರು ಈ ಇಂದು ಗ್ರಾಮೀಣ ಭಾಗದ ಕ್ರೀಡೆಗಳಾದ, ಮರಕೋತಿ, ಚಿಣ್ಣಿದಾಂಡು, ಗೋಲಿ, ಇಂತಹ ಗ್ರಾಮೀಣ ಪ್ರದೇಶದ ಕ್ರೀಡೆಗಳು ಮರೆಮಾಚಿದ್ದು ಈಗ ಹೆಚ್ಚು ಕ್ರಿಕೆಟ್, ಕಬ್ಬಡಿ, ವಾಲಿ ಬಾಲ್ ಕ್ರೀಡೆಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ ಮಕ್ಕಳು ಹಾಗೂ ಈಗಿನ ಯುವ ಪೀಳಿಗೆಗೆ ತಮ್ಮ ವಿದ್ಯಾಭ್ಯಾಸ ಜೊತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಇದರಿಂದ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ ಎಂದರು..

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುನಾಥ್, ಶರತ್, ಓಬಿಸಿ ಹೋಬಳಿ ಅಧ್ಯಕ್ಷರಾದ ಸೋಮಶೇಖರ್, ಜೆ.ಡಿ.ಎಸ್ ಯುವ ಮುಖಂಡ ರವಿಕುಮಾರ್ ಸೇರಿದಂತೆ ಮತ್ತಿತ್ತರರು ಇದ್ದರು..

ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ

error: