December 22, 2024

Bhavana Tv

Its Your Channel

ಗುಂಡ್ಲುಪೇಟೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಸವ ಜಯಂತಿ ಆಚರಣೆ

ಗುಂಡ್ಲುಪೇಟೆ ಪಟ್ಟಣದ ಗುರುಭವನದಲ್ಲಿ ನಡೆದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಸವ ಜಯಂತಿ ಆಚರಿಸಿದರು . ಕಾರ್ಯಕ್ರಮವನ್ನು ದೀಪ ಬೆಳಗುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿದ ಶಾಸಕ ಸಿಎಸ್ ನಿರಂಜನ್ ಕುಮಾರ್ ಶ್ರೀ ಜಗಜ್ಯೋತಿ ಬಸವೇಶ್ವರರು 12ನೇ ಶತಮಾನದಲ್ಲಿ ಬಿಜ್ಜಳನ ಆಸ್ಥಾನದಲ್ಲಿ ಆಡಳಿತ ಮಂತ್ರಿಯಾಗಿ ಬಾಳಷ್ಟು ಕ್ರಾಂತಿಕಾರಿ ಸುಧಾರಣೆಗಳನ್ನು ತಂದಿದ್ದಾರೆ ಅಂತಹ ಮಹಾನ್ ವ್ಯಕ್ತಿಯನ್ನು ಇಂದು 889 ಜನ್ಮ ದಿನಾಚರಣೆಯ ಪ್ರಯುಕ್ತ ನಾವು ಸ್ಮರಿಸೋಣ ಎಂದರು.
ಇದೇ ಸಂದರ್ಭದಲ್ಲಿ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಿದರು

ಈ ಸಂದರ್ಭದಲ್ಲಿ ವೀರಶೈವ ಮುಖಂಡರಾದ ಎಚ್ ಎಸ್ ನಂಜಪ್ಪ, ಶಿವಬಸಪ್ಪ, ಹೊರೆ ಯಾಲ ಮಹೇಶ್ ಮುಖ್ಯ ಭಾಷಣಕಾರರಾದ ಸಿದ್ದ ರಾಜಪ್ಪ ಹಾಗೂ ಪುರಸಭಾ ಸದಸ್ಯರುಗಳು, ಜಯರಾಮ್, ತಾಲೂಕು
ದಂಡಾಧಿಕಾರಿ ರವಿಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ, ಪುರಸಭೆ ಮುಖ್ಯಾಧಿಕಾರಿ ಹೇಮಂತ್ ರಾಜು, ಸಮಾಜ ಕಲ್ಯಾಣ ಇಲಾಖೆಯ ನಂಜುAಡೇಗೌಡ, ಮುಂತಾದ ವಿವಿಧ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳು ಯುವ ಮುಖಂಡರು ಹಾಜರಿದ್ದರು

ವರದಿ:-ಸದಾನಂದ ಕಣ್ಣೇಗಾಲ ಗುಂಡ್ಲುಪೇಟೆ

error: