December 22, 2024

Bhavana Tv

Its Your Channel

ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸಿ.ಪಿ.ಉಮೇಶ್ ನೇಮಕ

ಮಂಡ್ಯ:-ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್ ಅವರನ್ನು ನೇಮಕ ಮಾಡಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ

ಕಳೆದ ಎರಡು ವರ್ಷಗಳಿಂದ ಮಂಡ್ಯ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡುತ್ತಾ ಪಕ್ಷದ ಸಂಘಟನೆಯ ಜವಾಬ್ದಾರಿ ಹೊತ್ತಿದ್ದ ಜಿಲ್ಲಾಧ್ಯಕ್ಷ ಕೆ.ಜೆ.ವಿಜಯಕುಮಾರ್ ಅವರನ್ನು ಧಿಡೀರನೆ ಜಿಲ್ಲಾಧ್ಯಕ್ಷ ಹುದ್ದೆಯಿಂದ ಬದಲಾವಣೆ ಮಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದು ಪ್ರಸ್ತುತ ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಿರುವ ಸಿ.ಪಿ.ಉಮೇಶ್ ಅವರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ…

ಪ್ರಸ್ತುತ ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಕೆ.ಜೆ.ವಿಜಯಕುಮಾರ್ ಅವರನ್ನು ರಾಮನಗರ ಜಿಲ್ಲಾ ಸಹಪ್ರಭಾರಿ ಹುದ್ದೆಯ ಜವಾಬ್ದಾರಿ ನೀಡಲಾಗಿದೆ.

ವರದಿ. ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: