ಗುಂಡ್ಲುಪೇಟೆ ತಾಲೂಕಿನ ನಾಯಕ ಜನಾಂಗದ ವತಿಯಿಂದ ಪಟ್ಟಣದಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಯಕ ಸಮಾಜದ ತಾಲೂಕು ಅಧ್ಯಕ್ಷರಾದ ಎನ್. ಮಲ್ಲೇಶ್ ಮಾತನಾಡಿ ಎಸ್ಟಿ ಮೀಸಲಾತಿ ವಿಚಾರವಾಗಿ ಸರ್ಕಾರ ಕಡೆಗಣಿಸುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರ ೭.೫ % ಮೀಸಲಾತಿ ನೀಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ೩೮ ಗ್ರಾಮದ ಮುಖಂಡರುಗಳು , ಹಾಗೂ ಪಟ್ಟಣದ ನಾಯಕ ಜನಾಂಗದ ಪ್ರಮುಖರು ಮತ್ತು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಗಜಪಡೆಯ ತಾಲೂಕು ಅಧ್ಯಕ್ಷರಾದ ರಂಗಪ್ಪ ನಾಯಕ ಮತ್ತು ಕಾರ್ಯಕರ್ತರು ಹಾಜರಿದ್ದರು
ವರದಿ: ಸದಾನಂದ ಕನ್ನೇಗಾಲ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.