December 21, 2024

Bhavana Tv

Its Your Channel

ಕರ್ನಾಟಕದಲ್ಲಿ ಇಂದು 1 ಕೊರೋನಾ ಕೇಸ್ ಪತ್ತೆ : ಸೋಂಕಿತರ ಸಂಖ್ಯೆ 501ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಇಂದು ಹೊಸದಾಗಿ 1 ಕೊರೋನಾ ವೈರಸ್ ಕೇಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 501ಕ್ಕೆ ಏರಿಕೆಯಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೊರೋನಾ ಸೋಂಕಿನ ಪ್ರಕರಣ ಸಂಬಂಧ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ 47 ವರ್ಷ ಓರ್ವ ಮಹಿಳೆಗೆ ಕೊರೋನಾ ಸೋಂಕು ಪಾಸಿಟಿವ್ ದೃಢಪಟ್ಟಿದೆ ಎಂಬುದಾಗಿ ತಿಳಸಿದೆ. ಹೀಗಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 501ಕ್ಕೆ ಏರಿಕೆಯಾಗಿದೆ.

ಅಂದಹಾಗೇ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಇದುವರೆಗೆ 18 ಜನರು ಸಾವನ್ನಪ್ಪಿದ್ದಾರೆ. ಕೊರೋನಾ ಸೋಂಕಿತರಾಗಿದ್ದಂತ 177 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

source : kannadanews

error: