ಕೃಷ್ಣರಾಜಪೇಟೆ ತಾಲ್ಲೂಕಿನ ಬಂಡಿಹೊಳೆ ಗ್ರಾಮ ಪಂಚಾಯತಿ ವತಿಯಿಂದ ವಿಶ್ವ ವೈದ್ಯರ ದಿನ ವನ್ನು ಆಚರಿಸಲಾಯಿತು ವೈದ್ಯಾಧಿಕಾರಿ ಡಾ.ಪವನ್, ತಹಶೀಲ್ದಾರ್ ಎಂ.ವಿ.ರೂಪ ಮತ್ತು ತಾಲ್ಲೂಕು ಪಂಚಾಯತಿ ಇಓ ಸತೀಶ್ ಅವರಿಗೆ ಹೃದಯಸ್ಪರ್ಶಿ ಸನ್ಮಾನಿಸಲಾಯಿತು.
ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ವೈದ್ಯರ ಕೊಡುಗೆಯು ಅಪಾರವಾಗಿದೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಶ್ರೀ ಸಾಮಾನ್ಯರ ಆರೋಗ್ಯವನ್ನು ಸಂರಕ್ಷಣೆ ಮಾಡುವ ವೈದ್ಯರನ್ನು ನಾವು ದೇವರ ರೂಪದಲ್ಲಿ ಕಾಣುತ್ತಿದ್ದೇವೆ ಎಂದು ತಹಶೀಲ್ದಾರ್ ಎಂ.ವಿ.ರೂಪ ಹೇಳಿದರು.
ಅವರು ತಾಲ್ಲೂಕಿನ ಬಂಡಿಹೊಳೆ ಗ್ರಾಮ ಪಂಚಾಯತಿ ವತಿಯಿಂದ ಆಯೋಜಿಸಿದ್ದ ವಿಶ್ವ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಬಂಡಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪವನ್ ಅವರನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿದರು..
ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಮಾತನಾಡಿ ಬಂಡಿಹೊಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಜನಸಾಮಾನ್ಯರಿಗೆ ಹಾಗೂ ಮಹಿಳೆಯರಿಗೆ ಉತ್ತಮವಾದ ವೈದ್ಯಕೀಯ ಸೇವೆಯನ್ನು ನೀಡುತ್ತಾ ಎಲ್ಲರ ಮನಗೆದ್ದಿರುವ ವೈದ್ಯರಾದ ಡಾ.ಪವನ್ ಅವರನ್ನು ವಿಶ್ವ ವೈದ್ಯರ ದಿನಾಚರಣೆಯ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸುತ್ತಿರುವುದು ಇಡೀ ನಾಗರಿಕ ಸಮಾಜವೇ ಮೆಚ್ಚುವ ಸಂಗತಿಯಾಗಿದೆ ಎಂದು ಸತೀಶ್ ಹೇಳಿದರು..
ವೈದ್ಯಾಧಿಕಾರಿ ಡಾ.ಪವನ್ ಮಾತನಾಡಿ ವಿಶ್ವ ವೈದ್ಯರ ದಿನಾಚರಣೆಯ ಶುಭ ಸಂದರ್ಭದಲ್ಲಿ ನನ್ನ ಸೇವೆಯನ್ನು ಬಂಡಿಹೊಳೆ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ತಾಲ್ಲೂಕು ಆಡಳಿತದ ಮುಖ್ಯಸ್ಥರಾದ ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳ ಸಮಕ್ಷಮದಲ್ಲಿ ಸನ್ಮಾನಿಸಿ ಗೌರವಿಸಿರುವುದು ನನಗೆ ವೃತ್ತಿಯ ಬಗ್ಗೆ ವಿಶೇಷ ಅಭಿಮಾನ ಮೂಡಿದೆಯಲ್ಲದೇ ಗ್ರಾಮೀಣ ಪ್ರದೇಶದ ಜನರಿಗೆ ಇನ್ನೂ ಉತ್ತಮವಾದ ವೈದ್ಯಕೀಯ ಸೇವೆಯನ್ನು ನೀಡಬೇಕೆಂದು ಸಂಕಲ್ಪದ ಭಾವನೆಯು ಮೂಡಿದೆ. ಇಂದಿನ ಕ್ಷಣಗಳು ನನ್ನ ವೃತ್ತಿ ಬದುಕಿನಲ್ಲಿ ಮರೆಯಲಾಗದ ಅಮೂಲ್ಯ ಕ್ಷಣಗಳಾಗಿವೆ ಎಂದು ಅಭಿಮಾನದಿಂದ ಹೇಳಿದರು…
ಬಂಡಿಹೊಳೆ ಗ್ರಾಮ ಪಂಚಾಯತಿ ಅಧ್ಯಕ್ಷ ಸುನಿಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು…ಇದೇ ಸಂದರ್ಭದಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತ ಸೈಯ್ಯದ್ ಖಲೀಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಜಯಮ್ಮ, ಮಾಜಿಅಧ್ಯಕ್ಷ ಬಿ.ಆರ್.ಶಿವಕುಮಾರ್, ಕಾರ್ಯದರ್ಶಿ ಕೃಷ್ಣಪ್ಪ, ರಾಜಶ್ವನಿರೀಕ್ಷಕಿ ಚಂದ್ರಕಲಾ, ಗ್ರಾಮಲೆಕ್ಕಾಧಿಕಾರಿ ಪೂಜಾ, ಸದಸ್ಯರಾದ ಬಿಬಿ ಕಾವಲು ಮೋಹನ್, ದರ್ಶನ್, ಲೀಲಾವತಿ ಜಯರಾಮೇಗೌಡ, ಚಲುವಮ್ಮ ಮುದ್ದುಕೃಷ್ಣ, ಕೆ.ಕೆ.ಅಣ್ಣಪ್ಪ, ಮಧು, ಉಮೇಶ್, ರಾಮಯ್ಯ, ನಾಗಣ್ಣ, ಹೇಮಂತ್, ಜಯಂತಿ, ಬಿಲ್ ಕಲೆಕ್ಟರ್ ಅಶೋಕ್, ಕಂಪ್ಯೂಟರ್ ಆಪರೇಟರ್ ರಾಘವೇಂದ್ರ ಸೇರಿದಂತೆ ಗ್ರಾಮದ ಮುಖಂಡರು ಆಶಾ ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು..
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ .
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ