ಕೃಷ್ಣರಾಜಪೇಟೆ ಪಟ್ಟಣಕ್ಕೆ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಭೇಟಿ ನೀಡಿ 1700 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡಿ ಚಾಲನೆ ನೀಡುತ್ತಿರುವ ಹಿನ್ನೆಲೆಯಲ್ಲಿ ಸಚಿವ ಡಾ.ನಾರಾಯಣಗೌಡ ಅವರು ಇಂದು ಸಮಾರಂಭ ನಡೆಯಲಿರುವ ಟಿಬಿ ಬಡಾವಣೆಯ ಜಾಗವನ್ನು ಪರಿಶೀಲನೆ ನಡೆಸಿ ಸಿದ್ಧತೆಗಳನ್ನು ಅವಲೋಕನ ನಡೆಸಿದರು ..
ಜುಲೈ-21ರಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರೊಂದಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಕಂದಾಯ ಸಚಿವ ಆರ್.ಅಶೋಕ್, ಸಾರಿಗೆ ಸಚಿವ ಬಿ.ಶ್ರೀರಾಮುಲು, ಲೋಕೋಪಯೋಗಿ ಸಚಿವ ಗೋವಿಂದಕಾರಜೋಳ ಸೇರಿದಂತೆ ಹತ್ತಕ್ಕೂ ಹೆಚ್ಚು ಸಚಿವರು ಕೆ.ಆರ್.ಪೇಟೆ ಪಟ್ಟಣಕ್ಕೆ ಆಗಮಿಸುತ್ತಿದ್ದು 1700 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಮಾಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕನಿಷ್ಠ 25 ಸಾವಿರ ಜನರು ಭಾಗವಹಿಸಲಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸಲು ತಾಲ್ಲೂಕಿನ ಗ್ರಾಮೀಣ ಪ್ರದೇಶಗಳ ಜನರಿಗೆ ವಾಹನಗಳ ಸೌಲಭ್ಯವನ್ನು ಕಲ್ಪಿಸಿಕೊಡುತ್ತಿದ್ದೇವೆ. ಕೆ.ಆರ್.ಪೇಟೆ ಪಟ್ಟಣದ ಇತಿಹಾಸದ ಪುಟಗಳಲ್ಲಿ ದಾಖಲಾಗುತ್ತಿರುವ ಅಭಿವೃದ್ಧಿ ಪರ್ವವನ್ನು ತಾಲ್ಲೂಕಿನ ಜನತೆ ಕಣ್ಣಾರೆ ವೀಕ್ಷಿಸಿ ಆಶೀರ್ವದಿಸಬೇಕು ಎಂದು ಸಚಿವ ಡಾ.ನಾರಾಯಣಗೌಡ ಮನವಿ ಮಾಡಿದರು..
ಮುಖ್ಯಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ವೇದಿಕೆ ನಿರ್ಮಾಣದ ಸ್ಥಳ ವೀಕ್ಷಣೆಯ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ವಿ.ರೂಪ, ಸೆಸ್ಕ್ ಎಕ್ಸಿಕ್ಯುಟಿವ್ ಎಂಜಿನಿಯರ್ ಪ್ರತಿಭಾ, ಪುರಸಭೆಯ ಮುಖ್ಯಾಧಿಕಾರಿ ಕುಮಾರ್, ವಲಯ ಅರಣ್ಯಾಧಿಕಾರಿ ಹೆಚ್.ಎಸ್.ಗಂಗಾಧರ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಶ್ರೀರಂಗಪಟ್ಟಣ ತಾಲ್ಲೂಕು ಪಂಚಾಯತಿ ಮಾಜಿಅಧ್ಯಕ್ಷ ಶ್ರೀಧರ್, ಮುಖಂಡರಾದ ಡಿ.ಪಿ.ಪರಮೇಶ್, ಪರಿಸರ ಎಂಜಿನಿಯರ್ ಅರ್ಚನಾ, ಸೆಸ್ಕ್ ಎಇಇ ಕೃಷ್ಣ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನಾ ಕಾರ್ಯದಲ್ಲಿ ಭಾಗವಹಿಸಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ .
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ