April 30, 2024

Bhavana Tv

Its Your Channel

ಮೊಬೈಲ್ ಅಂಗಡಿಯೊoದರ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ನಾಲ್ವರು ಆರೋಪಿಗಳ ಬಂಧನ

ಕುoದಾಪುರ: ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಮೂಡುಗಣಪತಿ ದೇವಸ್ಥಾನದ ಬಳಿಯ ಮೊಬೈಲ್ ಅಂಗಡಿಯೊAದರ ಕಳ್ಳತನ ಪ್ರಕರಣಕ್ಕೆ ಸಂಬAಧಿಸಿದAತೆ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ ಮೂರು ದಿನದಲ್ಲಿ ಬೈಂದೂರು ಪೊಲೀಸರು ಬಂಧಿಸಿದ್ದಾರೆ.

ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ ಬೈಂದೂರು ಸಬ್ ಇನ್ಸ್ಪೆಕ್ಟರ್ ಪವನ್ ನಾಯಕ್ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದರು.
ಭಟ್ಕಳ ಮುರುಡೇಶ್ವರ ಮಾವಳ್ಳಿಯ ನಿವಾಸಿಗಳಾದ ಮೊಹಮ್ಮದ್ ಇಫ್ಜಲ್ (27), ಮಹಮ್ಮದ್ ಅಸೀಮ್ ಡೊನ್ನಾ (20), ಮಹಮ್ಮದ್ ರಫಿ (21) ಹಾಗೂ ಭಟ್ಕಳದ ಮೊಹಮ್ಮದ್ ರಾಹಿಕ್ (22) ಬಂಧಿತರು. ಮುರ್ಡೇಶ್ವರ ಬೀಚ್ ಬಳಿ ಆರೋಪಿಗಳನ್ನು ಬಂಧಿಸಿದ್ದು ಇವರಿಂದ ಕಳವು ಮಾಡಿದ 20 ಸಾವಿರ ಮೌಲ್ಯದ ಮೊಬೈಲ್ ಪೋನುಗಳು, ಕೃತ್ಯಕ್ಕೆ ಉಪಯೋಗಿಸಿದ 8 ಲಕ್ಷ ಮೌಲ್ಯದ ಕಾರು, ಮೂರು ಪವರ್ ಬಂಕ್ ಮೊದಲಾದವುಗಳನ್ನು ವಶಕ್ಕೆ ಪಡೆಯಲಾಗಿದೆ.

ಬಿಜೂರು ನಿವಾಸಿ ಪ್ರಶಾಂತ್ ಎನ್ನುವರ ಮಾಲೀಕತ್ವದ ಮೊಬೈಲ್ ಜೋನ್ ಎಂಬ ಅಂಗಡಿಯಲ್ಲಿ ಜು.5 ರಂದು ರಾತ್ರಿ ಅಂಗಡಿಯ ಶೆಟರ್ ಬಾಗಿಲನ್ನು ಮುರಿದು ಕಳ್ಳತನ ಮಾಡಿದ್ದು ಮಾರನೇ ದಿನ ಘಟನೆ ಬೆಳಕಿಗೆ ಬಂದಿತ್ತು. ಅಂಗಡಿಯಲ್ಲಿದ್ದ 3500 ರೂ. ನಗದು, 25 ಸಾವಿರ ರೂ. ಬೆಲೆಬಾಳುವ 17 ಕೀ ಪ್ಯಾಡ್ ಮೊಬೈಲ್ ಪೋನುಗಳು ಹಾಗೂ 5 ಸಾವಿರ ರೂ. ಮೌಲ್ಯದ ಮೊಬೈಲ್ ಗೆ ಉಪಯೋಗಿಸುವ ಪವರ್ ಬ್ಯಾಂಕ್ ಹಾಗೂ ಬ್ಲೂಟೂತ್ ಕಳವುಗೈದಿದ್ದು ಈ ವಸ್ತುಗಳ ಒಟ್ಟು ಮೌಲ್ಯ ರೂಪಾಯಿ 33,500 ರೂ. ಆಗಿದ್ದು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ಧಲಿಂಗಪ್ಪ ಹಾಗೂ ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ. ನಿರ್ದೇಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ನೇತೃತ್ವದ ಬೈಂದೂರು ಪಿಎಸ್ ಐ ಪವನ್ ನಾಯಕ್ ಮತ್ತವರ ತಂಡ ಆರೋಪಿಗಳನ್ನು ಬಂಧಿಸಿದೆ. ಬೈಂದೂರು ವೃತ್ತ ನಿರೀಕ್ಷಕ ಕಚೇರಿಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ಗಳಾದ ಮೋಹನ, ನಾಗೇಂದ್ರ, ಕೃಷ್ಣ , ಹಾಗೂ ಬೈಂದೂರು ಪೊಲೀಸ್ ಠಾಣಾ ಅಪರಾಧ ಸಿಬ್ಬಂದಿಗಳಾದ ಶ್ರೀನಿವಾಸ ಹಾಗೂ ಸುಜೀತ್ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

error: