ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ವಿಧಾನ ಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿಯವರು ತಾಲ್ಲೂಕಿನ ಮಂಚಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜು ಇದರ ೨೦೨೨ – ೨೩ ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಮತ್ತು ವಿದ್ಯಾರ್ಥಿ ಸಂಸತ್ತು ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ವಿದ್ಯಾರ್ಥಿ ಸಂಸತ್ತಿನ ಪ್ರತಿನಿಧಿಯಾಗುವುದು ಒಂದು ಜವಾಬ್ದಾರಿಯಾಗಿದ್ದು ,ಇದನ್ನು ಶಾಂತಿಯುತವಾಗಿ ನಿರ್ವಹಿಸಬೇಕು ,ಉಳಿದ ಎಲ್ಲಾ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಮ್ಮ ಕಾರ್ಯನಿರ್ವಹಿಸಬೇಕು ಎಂದು ವಿದ್ಯಾರ್ಥಿ ಪ್ರತಿನಿಧಿಗಳಿಗೆ ಹಾಗೂ ವಿಧ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಆರ್. ಜಿ ಹೆಗಡೆ ಬೆದೆಹಕ್ಕಲು ,ಮುಖ್ಯ ಅತಿಥಿಗಳಾಗಿ ಕಂಪ್ಲಿ ಪಂಚಾಯತ ಸದಸ್ಯರಾದ ಗಣೇಶ ರೋಕಡೆ, ಹಾಗೂ ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಿ. ಜಿ ಹೆಗಡೆ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳು, ಉಪನ್ಯಾಸಕರುಗಳು, ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ