December 22, 2024

Bhavana Tv

Its Your Channel

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆ

ಗುಂಡ್ಲುಪೇಟೆ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ 75ನೇ ಅಮೃತ ಮಹೋತ್ಸವದ ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಸಿ.ಶಿವಮೂರ್ತಿ ರವರ ಮಾತನಾಡಿ ನಮ್ಮ ದೇಶಕ್ಕೆ ಸ್ವಾತಂತ್ರ‍್ಯ ಬಂದು 75 ವರ್ಷ ಕಳೆದಿದೆ. ಹಾಗಾಗಿ ಇಂದು ದೇಶದ್ಯಾಂತ ಅಮೃತ ಮಹೋತ್ಸವದ 75ನೇ ವರ್ಷದ ಸ್ವಾತಂತ್ರೋತ್ಸವವನ್ನು ಸಡಗರ ಸಂಭ್ರಮದಿAದ ಆಚರಿಸಿದ್ದೇವೆ ಈ ಸ್ವಾತಂತ್ರವನ್ನು ತಂದುಕೊಟ್ಟ ಕಾರಣಭೂತರಾದ ಮಹಾನ್ ವ್ಯಕ್ತಿಗಳನ್ನ ಇಂದು ಸ್ಮರಿ ಸೋಣ ಎಂದರು. ಈ ಶುಭ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್ ಸಿ ಶಿವಮೂರ್ತಿ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಶಾಲೆಯ ಮಕ್ಕಳು ಹಾಜರಿದ್ದರು.

ವರದಿ: ಸದಾನಂದ ಕನ್ನೇಗಾಲ

error: