ಭಟ್ಕಳ :-ವಿದ್ಯಾರ್ಥಿಗಳಾದ ವಿಪುಲ್ ಪಡಿಯಾರ 200 ಮೀಟರ್ ಓಟದಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದರಂತೆ ಈ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಶ್ರೇಯಾ ಮೋಹನ ನಾಯ್ಕ, ಜಾವಲಿನ್ ಥ್ರೋ ಹಾಗೂ ಟ್ರಿಪಲ್ ಜಂಪ್ ನಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕುಮಾರ ವಿಜೇತ ಗೌಡ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗಳಾದ ಸೈಯದ್ ಮುಖೀದ್ ಹಾಗೂ ಮಹಮ್ಮದ್ ಅಫ್ಜಲ್ ಕರಾಟೆಯಲ್ಲಿ ಹಾಗೂ ಅಹಮ್ಮದ್ ಕಟ್ಟಲ್ ಥ್ರೋ ಬಾಲ್ ನಲ್ಲಿ ಉತ್ತಮ ಸಾಧನೆ ತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
More Stories
ಹೊಳೆಯಲ್ಲಿ ಆಕಸ್ಮಿಕವಾಗಿ ಮುಳುಗಿ ಇಬ್ಬರ ಸಾವು.
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು: