ಹಾವೇರಿ : ಹಾವೇರಿಯಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ” ಪೂರ್ವಭಾವಿ ಸಭೆಯಲ್ಲಿ ” ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರವರು ಪಾಲ್ಗೊಂಡು, ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಿದರು.
ಈ ವೇಳೆ ಸಚಿವರು, ಸಾಹಿತ್ಯ ಸಮ್ಮೇಳನದ ಯಶಸ್ವಿಯಾಗಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ, ಸಾರ್ವಜನಿಕರ ಸಹಕಾರ ಪಡೆದು ಅತ್ಯಂತ ಅದ್ದೂರಿಯಾಗಿ ಸಮ್ಮೇಳನ ಯಶಸ್ವಿಯಾಗುವಂತೆ ನೋಡಿಕೊಳ್ಳುಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಭೆಯಲ್ಲಿ ಇಂಧನ ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಸಚಿವರಾದ ವಿ.ಸುನೀಲ ಕುಮಾರ, ಶಾಸಕರಾದ ನೆಹರು ಓಲೇಕಾರ, ಅರುಣಕುಮಾರ್ ಪೂಜಾರ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಮಹೇಶ ಜೋಶಿ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
More Stories
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶ್ರೀಪಾದ ಶೆಟ್ಟಿ
86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಧ್ವಜಾರೋಹಣ ನೆರವೇರಿಸಿದ ಸಚಿವ ಶಿವರಾಮ ಹೆಬ್ಬಾರ
ಸಚಿವ ಶಿವರಾಮ ಹೆಬ್ಬಾರ ರವರ ನೇತೃತ್ವದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ