ಬೆಂಗಳೂರು: ಕೊರೋನಾ ವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ರಜೆ ವಿಸ್ತರಣೆ ಮಾಡಲಾಗಿದೆ.
ಈ ಹಿಂದೆ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ವಿಚಾರಣಾ ಹಾಗೂ ಜಿಲ್ಲಾ ನ್ಯಾಯಾಲಯಗಳಿಗೆ ಮೇ 16ರವರೆಗೆ ನೀಡಲಾಗಿದ್ದ ರಜೆಯನ್ನು ಜೂನ್ 6 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿದು ಬಂದಿದೆ. ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಅವರ ಆದೇಶದ ಮೇಕರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬದಾಮಿಕರ್ ನಿನ್ನೆ ನೋಟಿಫಿಕೇಷನ್ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ. ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಸಂಚಾರಿ ಪೀಠಗಳು ಸೇರಿ ಎಲ್ಲ ಜಿಲ್ಲಾ, ವಿಚಾರಣಾ, ಕೌಟುಂಬಿಕ, ಕಾರ್ಮಿಕ ನ್ಯಾಯಾಲಯಗಳು ಮತ್ತು ಕೈಗಾರಿಕಾ ನ್ಯಾಯಾಧೀಕರಣಗಳಿಗೆ ಜೂನ್ 6 ರವರೆಗೆ ರಜೆ ಇರಲಿದೆ.
source: NEWS HUNT
More Stories
ಶರಾವತಿಯ ನದಿ ತಿರುವಿನ ಮಾರಕ ಯೋಜನೆ
ಸಾಹಿತಿ ಶಿಕ್ಷಕಿ ಜಯಶ್ರೀ ರಾಜು ರವರಿಗೆ ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ ಭಾಜನ
ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್:ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ