December 22, 2024

Bhavana Tv

Its Your Channel

ರಾಷ್ಟ್ರಧ್ವಜದ ಅಪಮಾನವನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ

ಶಿರಸಿ : ಗಣರಾಜ್ಯೋತ್ಸವ ಸಮಯದಲ್ಲಿ ರಾಷ್ಟ್ರಧ್ವಜದ ಅಪಮಾನವನ್ನು ತಡೆಗಟ್ಟಲು ನ್ಯಾಯಾಲಯದ ಆದೇಶದಂತೆ ಮತ್ತು ಕೇಂದ್ರ ಸರಕಾರದ ಪ್ಲಾಸ್ಟಿಕ್ ನಿಷೇಧದ ನಿರ್ಧಾರದಂತೆ ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ ಮಾಡಲಾಯಿತು.

ರಾಷ್ಟ್ರಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಜನವರಿ 26 ರಂದು, ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ; ಆದರೆ ಅದೇ ದಿನ, ಅದೇ ಕಾಗದದ/ಪ್ಲಾಸ್ಟಿಕ್‌ನ ಸಣ್ಣ ಸಣ್ಣ ರಾಷ್ಟ್ರಧ್ವಜಗಳು ರಸ್ತೆಗಳು, ಕಸ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ್ ಧ್ವಜಗಳು ಬೇಗನೇ ನಾಶವಾಗುವುದಿಲ್ಲ, ಆದ್ದರಿಂದ ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ. ಅದಲ್ಲದೆಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ ಮಾಡುವುದು' ಸಂವಿಧಾನಬಾಹಿರವಾಗಿದೆ. ಹಾಗೆಯೇ, ಈ ವರ್ಷ, ಅಂಗಡಿಗಳಲ್ಲಿ ಮತ್ತು ಇ-ಕಾಮರ್ಸ್ ಜಾಲತಾಣಗಳಲ್ಲಿ ತ್ರಿವರ್ಣ ಮಾಸ್ಕಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ. ತ್ರಿವರ್ಣ ಮಾಸ್ಕ್ ಬಳಕೆಯಿಂದ ರಾಷ್ಟ್ರಧ್ವಜದ ಪಾವಿತ್ರ‍್ಯಕ್ಕೆ ಧಕ್ಕೆಯಾಗುತ್ತದೆ.ತ್ರಿವರ್ಣ ಮಾಸ್ಕ್’ ದೇಶಭಕ್ತಿಯ ಪ್ರದರ್ಶನದ ಮಾಧ್ಯಮವಲ್ಲ, ಅಲ್ಲದೇ ಧ್ವಜ ಸಂಹಿತೆಗನುಸಾರ ರಾಷ್ಟ್ರಧ್ವಜವನ್ನು ಈ ರೀತಿ ಬಳಸುವುದು' ಧ್ವಜಕ್ಕೆ ಮಾಡಿದ ಅವಮಾನವೇ ಆಗಿದೆ. ಇದುರಾಷ್ಟ್ರೀಯ ಗೌರವದ ಮಾನನಷ್ಟ ತಡೆ ಕಾಯ್ದೆ 1971’ರ ಉಲ್ಲಂಘನೆಯಾಗಿದೆ. ಆದ್ದರಿಂದ, `ತ್ರಿವರ್ಣ ಮಾಸ್ಕ್’ ಮಾರಾಟ ಮಾಡುವ ಮತ್ತು ಬಳಸುವವರ ವಿರುದ್ಧ ಅಪರಾಧಗಳನ್ನು ನಮೂದಿಸಬೇಕು ಎಂದು ಒತ್ತಾಯಿಸಿ ಇಂದು ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮಸ್ತ ಹಿಂದೂ ಸಂಘಟನೆಗಳು ಶಿರಸಿಯ ಸಹಾಯಕ ಆಯುಕ್ತರಿಗೆ ಮನವಿಯನ್ನು ನೀಡಲಾಯಿತು.
ಈ ಸಂಧರ್ಭದಲ್ಲಿ ಹಿಂದುತ್ವನಿಷ್ಠರಾದ ಸಚ್ಚಿದಾನಂದ ಹೆಗಡೆ, ಪವಿತ್ರ ಹೊಸೂರು, ಶಿರಸಿ ನಗರಸಭಾಧ್ಯಕ್ಷೆ ವೀಣಾ ಶೆಟ್ಟಿ, ಹಿತೇಶ ನಾಯ್ಕ್, ಮಹೇಂದ್ರ ಮುರುಡೇಶ್ವರ, ಸಚಿನ್ ಶೇಟ್, ಸತೀಶ್ ಕುಮಟಕರ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಶರತ್ ಕುಮಾರ್ ನಾಯ್ಕ್, ಶ್ರೀಕಾಂತ್ ಪೂಜಾರಿ, ಸುಮಂಗಲಾ ನಾಯಕ್, ಭಾವನಾ ನೆತ್ರೆಕರ್, ಶಾರದಾ ಆಚಾರಿ ಮುಂತಾದವರು ಉಪಸ್ಥಿತರಿದ್ದರು.

error: