December 21, 2024

Bhavana Tv

Its Your Channel

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಜಾ ಧ್ವನಿಯ ಯಾತ್ರೆಯ ಸಮಾರಂಭ

ಬಾಗಲಕೋಟೆಯ ವಿದ್ಯಾಗಿರಿಯ ಕಾಳಿದಾಸ ಕಾಲೇಜ್ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದ ಪ್ರಜಾ ಧ್ವನಿ ಯಾತ್ರೆ ಜನಸಾಗರ ಮಧ್ಯೆ ಬಹಳ ಅದ್ದೂರಿಯಿಂದ ಜರುಗಿತು ಕಾರ್ಯಕ್ರಮದಲ್ಲಿ ಡಬಲ್ ಎಂಜಿನ್ ಸರ್ಕಾರದ ಭ್ರಷ್ಟಾಚಾರವನ್ನು ಎಳೆ ಎಳೆಯಾಗಿ ರಾಜ್ಯ ನಾಯಕರುಗಳು ಬಿಚ್ಚಿಟ್ಟರು. ಹಾಗೇಯೆ ರಾಜ್ಯದ ಅಭಿವೃದ್ಧಿಗೆ,ಬೆಲೆಯೇರಿಕೆಯಿಂದ ನಲುಗಿರುವ ರಾಜ್ಯಕ್ಕೆ ನೆಮ್ಮದಿ ನೀಡಲು ಕಾಂಗ್ರೆಸ್ ಪಕ್ಷ ಗೃಹ ಜ್ಯೋತಿ, ಗೃಹ ಲಕ್ಷ್ಮಿ ಯೋಜನೆ ಘೋಷಿಸಿದೆ. ಪ್ರತೀ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಮನೆಯ ಯಜಮಾನಿಗೆ ಮಾಸಿಕ 2000 ರೂ. ನೀಡುವುದು ನಮ್ಮ ಪಕ್ಷದ ವಾಗ್ದಾನ ವಾಗಿದೆ ಎಂದು ರಾಜ್ಯ ನಾಯಕರು ಹೇಳಿದರು.
ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಮಾತನಾಡಿ ನಮ್ಮ ಕಾಂಗ್ರೆಸ್ ಪಕ್ಷವು ಪ್ರಜಾಧ್ವನಿ ಎಂಬ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಸಂಚರಿಸಿ ಸರಕಾರದ ಆಡಳಿತ ವೈಖರಿಯನ್ನು ಹಾಗೂ ಭ್ರಷ್ಟಾಚಾರವನ್ನು ಬಿಚ್ಚಿಟ್ಟರು ಹಾಗೂ ವಿರೋಧ ಪಕ್ಷದ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ ಸಿಎಂ ಬೊಮ್ಮಾಯಿ ಅವರ ಸರಕಾರ ಯಾವೊಂದು ಯೋಜನೆಗಳನ್ನು ಜಾರಿಗೊಳಿಸಿಲ್ಲ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕೃಷಿ ಕಾಯ್ದೆಯನ್ನು ರದ್ದು ಮಾಡುತ್ತೇವೆ ಎಂದು ಹೇಳಿದರು ಇನ್ನು ಅನೇಕ ಯೋಜನೆಗಳನ್ನು ನಾವು ಜಾರಿಗೆ ತರುತ್ತೇವೆ ಎಂದು, ಜನರಿಗೆ ಆಶ್ವಾಸನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅದ್ಯಕ್ಷರಾದ ಡಿ ಕೆ ಶಿವಕುಮಾರ , ಮಾಜಿ ಮುಖ್ಯಮಂತ್ರಿಗಳು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ,ಬಿ.ಕೆ ಹರಿಪ್ರಸಾದ , ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ ಮೊಹಮ್ಮಸ್ ನಲಪಾಡ್ , ಆರ್ ಬಿ ತಿಮ್ಮಾಪೂರ , ಎಸ್ ಆರ್ ಪಾಟೀಲ್ ಹಾಗೂ ಮಾಜಿ ಶಾಸಕರಾದ ಎಚ್ ವೈ ಮೇಟಿ ಹಾಗೂ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರಾದ ಎಸ್. ಜಿ ನಂಜಯ್ಯನ ಮಠ ಅವರು ಸೇರಿದಂತೆ ಪಕ್ಷದ ಹಿರಿಯರು, ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ: ನಿಂಗಪ್ಪ ಕಡ್ಲಿಮಟ್ಟಿ

error: