December 19, 2024

Bhavana Tv

Its Your Channel

ಬಾಗಲಕೋಟ ಜಿಲ್ಲೆಯ ಹುನಗುಂದ್ ತಾಲೂಕಿನ ಕಮತಗಿ ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿ ಆವರಣದಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿ0ದ ಆಚರಿಸಿದರು

ಬಾಗಲಕೋಟ ; ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳಾದ ಸುರೇಶ್ ಬಿ ಪಾಟೀಲ್ ಅವರು ಧ್ವಜಾರೋಹಣವನ್ನು ನೆರೆವೇರಿಸಿದರು ಈ ಸಂದರ್ಭದಲ್ಲಿ ಮಾತನಾಡಿ ಈ 74ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿ ಈ ದಿನವನ್ನು ಸಂವಿಧಾನ ದಿನವೆಂದು ಆಚರಿಸಬೇಕು ಎಂದು ಹೇಳಿದರು. ಸಂವಿಧಾನವನ್ನು ಬರೆದಂತಹ ಮಹಾನ್ ವ್ಯಕ್ತಿಯಾದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರನ್ನು ನೆನೆದು ಈ ಸಂವಿಧಾನವನ್ನು ಅವರು ಬರೆದಿದ್ದರಿಂದ ನಾವೆಲ್ಲ ಈಗ ಸ್ವಾತಂತ್ರದಿ0ದ ಈ ಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದರು ನಮ್ಮದು ಜಾತ್ಯಾತೀತ ರಾಷ್ಟ್ರ ಇಲ್ಲಿ ಎಲ್ಲರೂ ಸಮಾನರು ಯಾವುದೇ ಭೇದಭಾವ ಇಲ್ಲ ಎಲ್ಲರೂ ಒಂದಾಗಿ ಬಾಳುತ್ತಿದ್ದೇವೆ ಎಂದು ಹೇಳಿದರು, ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿಯ ಎಲ್ಲ ಸದಸ್ಯರು ಎಲ್ಲ ಸಿಬ್ಬಂದಿ ವರ್ಗದವರು ಹಾಗೂ ಊರಿನ ಪ್ರಮುಖರು ಊರಿನ ನಾಗರೀಕರೆಲ್ಲರೂ ಮತ್ತು ವಿದ್ಯಾರ್ಥಿಗಳೆಲ್ಲರೂ ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

error: