ಕಾರ್ಕಳ : – ಐ ಎ ಎಸ್ ಅಧಿಕಾರಿ ಎಳ್ಳಾರೆ ಸದಾಶಿವ ಪ್ರಭು ವಿಜಯನಗರ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆಯ ಬಿ. ಸದಾಶಿವ ಪ್ರಭು ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕ ಕಿರಿಯ ವಾರಂಟ್ ಅಧಿಕಾರಿಯಾಗಿ ನಿವೃತ್ತಿ ಹೊಂದಿದರು. ನಂತರ 2005 ರಲ್ಲಿ ಮಂಗಳೂರಿನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ನೇಮಕಾತಿ ಹೊಂದಿದರು. 2006 ಬ್ಯಾಚ್ ನ ಕೆ.ಎ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, 2008ರಲ್ಲಿ ಸಹಾಯಕ ಅಯುಕ್ತರಾಗಿ ಕೆ.ಎ.ಎಸ್ ಸೇವೆಗೆ ಸೇರ್ಪಡೆಗೊಂಡರು.
ಬಿಜಾಪುರದಲ್ಲಿ ಪ್ರಾಯೋಗಿಕ ತರಬೇತಿ ಮುಗಿಸಿದ ಬಳಿಕ ಅವಿಭಾಜಿತ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹಾಯಕ ಕಮಿಷನರ್ ಆಗಿ, ಬಳಿಕ ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದರು. ನಂತರ ಕರ್ನಾಟಕ ಸರಕಾರದ ಕಂದಾಯ ಇಲಾಖೆಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಬಳಿಕ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಯಾಗಿ ಬಳಿಕ ಐ ಎ ಎಸ್ ಪದೋನ್ನತಿ ಪಡೆದು ಬೆಂಗಳೂರಿನ ಮೆಲ್ಮನವಿ ನ್ಯಾಯಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,