December 22, 2024

Bhavana Tv

Its Your Channel

ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬAಧಪಟ್ಟAತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯದ ಹಿಂದುಳಿದ ಜಾತಿಗಳ ಪೈಕಿ ಒಂದಾಗಿರುವ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಸಾರಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕೆಂಬುದು ಸಮುದಾಯದ ಬಹುಕಾಲದ ಬೇಡಿಕೆಯಾಗಿತ್ತು.

ಸಮುದಾಯದ ಈ ಬೇಡಿಕೆ ಈಡೇರಿಕೆಗಾಗಿ ಕೆಲ ದಿನಗಳ ಹಿಂದಷ್ಟೇ ಸಚಿವ ವಿ ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಸ್ವಾಮೀಜಿಗಳು ಮತ್ತು ಸಮುದಾಯದ ಮುಖಂಡರ ಜೊತೆ ಭೇಟಿಯಾಗಿ ನಿಗಮ ಸ್ಥಾಪನೆಗೆ ಮನವಿ ಸಲ್ಲಿಸಿದ್ದರು. ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಿಎಂ ಬೊಮ್ಮಾಯಿ ನೀಡಿದ ಭರವಸೆ ಈಗ ಕಾರ್ಯ ರೂಪಕ್ಕೆ ಬಂದಿದೆ.

ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸ್ಪಂದಿಸುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ. ಇದಕ್ಕಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಸಚಿವರಾದ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ವರದಿ: ಅರುಣ ಭಟ್ ಕಾರ್ಕಳ

error: