December 22, 2024

Bhavana Tv

Its Your Channel

ಕಮತಗಿ ಪಟ್ಟಣದಲ್ಲಿ ಹೋಳಿ ಹಬ್ಬ ನಿಮಿತ್ತ ಶಾಂತಿ ಸಭೆ

ಕಮತಗಿ ಪಟ್ಟಣದಲ್ಲಿ ಹೋಳಿ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯನ್ನು ಆಚರಿಸಬೇಕು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು ಎಂದು ಅಮೀನಗಡ ಪೊಲೀಸ್ ಠಾಣೆಯ ಪಿಎಸ್‌ಐ ಸಂಜೀವಕುಮಾರ ಕಲ್ಲೂರ ಹೇಳಿದರು. ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ನಡೆದ ಶಾಂತಿಪಾಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿಧರ್ಮದ ಹಬ್ಬದ ಹಿಂದೆ ಐತಿಹಾಸಿಕ ಹಿನ್ನೆಲೆ ಇರುತ್ತದೆ. ಅದನ್ನು ಅರ್ಥಪೂರ್ಣವಾಗಿ ಆಚರಿಸಿದಾಗ ಹಬ್ಬ ಹರಿ ದಿನಗಳಿಗೆ ಅರ್ಥ ಬರುತ್ತದೆ. ಹೀಗಾಗಿ ಹೋಳಿ ಹಬ್ಬವನ್ನು ಎಲ್ಲರೂ ಸೇರಿ ಶಾಂತಿ, ಸೌಹಾರ್ದತೆಯಿಂದ ಆಚರಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುರೇಶ ಪಾಟೀಲ, ಪ.ಪಂ. ಸದಸ್ಯರು, ಪಟ್ಟಣದ ಎಲ್ಲ ಸಮಾಜದ ಹಿರಿಯರು, ಯುವಕರು, ಪೊಲೀಸ್ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ: ನಿಂಗಪ್ಪ ಕಡ್ಲಿಮಟ್ಟಿ

error: