March 15, 2025

Bhavana Tv

Its Your Channel

ಶ್ರೀ ಭುವನೇಂದ್ರ ಕಾಲೇಜಿನ ಸಂಸ್ಥಾಪಕರ ದಿನಾಚರಣೆ ಮತ್ತು ಕಾಲೇಜು ವಾರ್ಷಿಕೋತ್ಸವ

ಕಾರ್ಕಳ : ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಸಂಸ್ಥೆ ಜಿಲ್ಲೆಯ ನಾನಾ ಕಡೆ ಶಿಕ್ಷಣಸಂಸ್ಥೆಗಳನ್ನು ಸ್ಥಾಪಿಸಿತು. ಇದಕ್ಕೆಲ್ಲಾ ಕಾರಣ ಡಾ.ಟಿ.ಎಂ.ಎ.ಪೈಯವರು. ಉನ್ನತ ಶಿಕ್ಷಣಕ್ಕೆ ಭದ್ರಬುನಾದಿ ಹಾಕುವ ಮತ್ತು ಗ್ರಾಮೀಣ ಪ್ರದೇಶದ ಶಿಕ್ಷಣಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶವಿಟ್ಟುಕೊಂಡಿದ್ದರು. ಅವರು ಹಾಕಿಕೊಟ್ಟ ದಾರಿಯಲ್ಲಿ ಇಂದು ಕೂಡ ಆ ಸಂಸ್ಥೆ ಮುನ್ನಡೆಯುತ್ತಿದೆ. ಇಂದು ಶ್ರೀ ಭುವನೇಂದ್ರ ಕಾಲೇಜು ತನ್ನ ಸರ್ವಾಂಗೀಣ ಸಾಧನೆಯ ಫಲವಾಗಿ ಎಲ್ಲರ ಮನವನ್ನು ಗೆದ್ದಿದೆ ಮಾತ್ರವಲ್ಲ ಗುಣಮಟ್ಟದ ಶಿಕ್ಷಣದಿಂದಲಾಗಿ ಅತ್ಯುತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡಮಾಡಿರುವುದು ನಮಗೆಲ್ಲರಿಗೂ ಸಂತೋಷದ ಸಂಗತಿ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಮಣಿಪಾಲ ವಿಶ್ವವಿದ್ಯಾಲಯ ಇಲ್ಲಿನ ಸಹ ಕುಲಾಧಿಪತಿ ಲೆಪ್ಟಿನೆಂಟ್ ಜನರಲ್ ಡಾ. ಎಂ.ಡಿ. ವೆಂಕಟೇಶ್ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು,
ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡ ಕಾಲೇಜಿನ ಆಡಳಿತಮಂಡಳಿಯ ಸಿ ಎ ಶಿವಾನಂದ ಪೈಯವರು ಮಾತನಾಡಿ ವಿದ್ಯಾರ್ಥಿಗಳು ಕಲಿಕೆಯ ಹಂತದಲ್ಲಿ ಅತ್ಯುತ್ತಮ ಸಂಸ್ಕಾರವನ್ನು ರೂಪಿಸಿಕೊಂಡು ಬದುಕನ್ನು ಹಸನು ಮಾಡಿಕೊಳ್ಳಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಕಾಲೇಜಿನ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳು, ಪದವಿಪೂರ್ವ ಕಾಲೇಜಿನ ಅತೀ ಉನ್ನತ ಶ್ರೇಣಿಯ ವಿದ್ಯಾರ್ಥಿಗಳು ಹಾಗೂ ರಾಷ್ಟಿçÃಯ, ಅಂತಾರಾಷ್ಟಿçÃಯ ಮಟ್ಟದಲ್ಲಿ ಕೀರ್ತಿಯನ್ನು ತಂದಿತ್ತ ಕ್ರೀಡಾಳುಗಳನ್ನು ಸಂಮಾನಿಸಿ ಪುರಸ್ಕರಿಸಲಾಯಿತು.
ಸಮಾರಂಭದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ದತ್ತಾತ್ರೇಯ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಎ. ಕೋಟ್ಯಾನ್ ಸ್ವಾಗತಿಸಿದರು. ಶ್ರೀ ಭುವನೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಮೇಶ್ ಎಸ್.ಸಿ. ವಂದಿಸಿದರು. ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ನಂದಕಿಶೋರ್ ಕಾರ್ಯಕ್ರಮ ನಿರೂಪಿಸಿದರು.
ಅರುಣ ಭಟ್ ಕಾರ್ಕಳ

error: