December 19, 2024

Bhavana Tv

Its Your Channel

ಚಿಕ್ಕನಕೋಡ್ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಗುಂಡಿ ಬೈಲ್ ನಂಬರ್ ಒನ್ ಶಾಲೆಯಲ್ಲಿ

ಹೊನ್ನಾವರ : ಪ್ರತಿಭಾ ಕಾರಂಜಿಗೆ ಕ್ಲಸ್ಟನ 10 ಶಾಲೆಗಳಿಂದ ಸುಮಾರು 80 ವಿದ್ಯಾರ್ಥಿಗಳು ವಿವಿಧ ರೀತಿಯ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಸಭಾ ಕಾರ್ಯಕ್ರಮವನ್ನು ಚಿಕ್ಕನಕೋಡ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ಯಾಮಲಾ ನಾಯ್ಕ ಉದ್ಘಾಟಿಸಿ, ಇಂತಹ ಕಾರ್ಯಕ್ರಮ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಅತ್ಯಂತ ಅವಶ್ಯಕ ವಿದ್ಯಾರ್ಥಿಗಳಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರ ಅನಾವರಣಗೊಳ್ಳಲು ಈ ವೇದಿಕೆ ಸಾಕ್ಷಿಯಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರು ಹಾಗೂ ನಿಕಟ ಪೂರ್ವ ಅಧ್ಯಕ್ಷರಾದ ವಿಘ್ನೇಶ್ವರ್ ಹೆಗಡೆಯ ಮತ್ತು ಬಿ ಆರ್ ಪಿ ಸತೀಶ್ ನಾಯಕ್ ಉಪಸ್ಥಿತರಿದ್ದರು. ಶಾಲಾ ಮುಖ್ಯಾಧ್ಯಾಪಕರಾದ ಶ್ರ ಶಾಂತರಾಮ್ ಮಡಿವಾಳ ರವರ ನೇತೃತ್ವದಲ್ಲಿ ಹಾಗೂ ಸಿ ಆರ್ ಪಿ ಪ್ರಮೀಳಾ ಕೆ ಎಸ್ ಇವರ ಮಾರ್ಗದರ್ಶನದಲ್ಲಿ ಎಲ್ಲಾ ಶಿಕ್ಷಕರ, ಪಾಲಕರ,ಪೂರ್ವ ವಿದ್ಯಾರ್ಥಿಗಳ, ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸದಸ್ಯರ ಸಹಕಾರದೊಂದಿಗೆ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆರವೇರಿತು.
ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸ್ಪರ್ಧೆಗಳು ಜರುಗಿದವು. ವಿಚೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು

error: