ಹೊನ್ನಾವರ: ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ (75) ಮಂಗಳವಾರ ರಾತ್ರಿ ನಿಧನರಾದರು.
ತಾಲೂಕಿನ ಹಡಿನಬಾಳ ಗ್ರಾಮದ ಕಪ್ಪೆಕೆರೆಯವರಾದ ಇವರು ತಮ್ಮ ಸಹೋದರ ಪ್ರಸಿದ್ಧ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರಲ್ಲಿ ಯಕ್ಷಗಾನದ ಮಟ್ಟುಗಳನ್ನು ಕಲಿತು ಗುಂಡುಬಾಳ, ಇಡಗುಂಜಿ, ಬಚ್ಚಗಾರು, ಶಿರಸಿ, ಪಂಚಲಿAಗ, ಮಂದಾರ್ತಿ ಮೇಳಗಳಲ್ಲಿ ಐದು ದಶಕಗಳ ಕಲಾಸೇವೆ ಗೈದಿದ್ದರು. ಶಿರಸಿ ಮೇಳದಲ್ಲಿ ವ್ಯವಸ್ಥಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ಎಲ್ಲ ರೀತಿಯ ಪಾತ್ರಗಳನ್ನೂ ಸಮರ್ಥವಾಗಿ ಪ್ರಸ್ತುತ ಪಡಿಸುತ್ತಿದ್ದ ಅವರು ಕಲಾಭಿಮಾನಿಗಳನ್ನು ಹೊಂದಿದ್ದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಉಡುಪಿ ಯಕ್ಷಗಾನ ಕಲಾರಂಗ ಪ್ರಶಸ್ತಿ, ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ. ಅವರಿಗೆ ಪತ್ನಿ, ನಾಲ್ವರು ಪುತ್ರರು ಹಾಗೂ ಬಂಧು ಬಳಗ ಇದ್ದಾರೆ.
More Stories
ಕನ್ನಡ ಕಾರ್ತಿಕ 2024ರ ಅನುದಿನ ಅನುಸ್ಪಂದನ
ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ :ಮಂಜುನಾಥ ನಾಯ್ಕ
“ದಿ ಓಶೀಯನ್ ಕನೆಕ್ಷನ್” ಎಂಬ ಸಾಕ್ಷ್ಯಚಿತ್ರದ ಪ್ರದರ್ಶನ