September 26, 2024

Bhavana Tv

Its Your Channel

ತುಳುನಾಡಿನ ಕಾರಣೀಕ ಮೆರೆದ ಕಲ್ಜಿಗ ಸಿನೇಮಾ, ಕಾಂತಾರದ ಬೆನ್ನಿಗೇ ಮತ್ತೊಂದು ಕಲಾತ್ಮಕ ಚಿತ್ರ ಕೊಟ್ಟ ಕರಾವಳಿ

ಕುಂದಾಪುರ: ತುಳುನಾಡ ಸೀಮೆಯಲ್ಲಿ ಅಪ್ರತಿಮ ಕಲಾವಿದರಿದ್ದಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ ಸಿನೆಮಾ ಕ್ಲಲ್ಜಿಗ. ಶೀರ್ಷಿಕೆಯಲ್ಲಿಯೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಿರುವ ಈ ಚಿತ್ರ ಸೆಪ್ಟಂಬರ್ 13ರಂದು ತೆರೆಕಂಡಿದೆ. ಕರಾವಳಿಯಲ್ಲಿ ಅನಾದಿಕಾಲದಿಂದಲೂ ನಂಬಿಕೊAಡು ಬಂದ ದೈವರುಗಳು ಇಲ್ಲಿನ ಜನರ ಜೀವನಾಡಿಯಾಗಿದ್ದುಕೊಂಡು ತಮ್ಮದೇ ಕಾರಣೀಕ ಮೆರೆಯುತ್ತಿವೆ. ಕೊರಗಜ್ಜನ ಕಾರಣೀಕವೂ ಅತ್ಯಂತ ಪ್ರಭಾವಶಾಲಿಯಾಗಿದ್ದು, ಅದರ ಕಾರಣೀಕವನ್ನು ಕಲ್ಜಿಗ ಸಿನೆಮಾ ಅತ್ಯಂತ ಯಶಸ್ವಿಯಾಗಿ ಪ್ರತಿಪಾದಿಸಿದೆ. ಕಲಾತ್ಮಕವಾಗಿಯೂ ಯಶಸ್ವಿಯಾಗಿರುವ ಕಲ್ಜಿಗ ಸಿನೆಮಾದಲ್ಲಿ ಪ್ರತಿಯೊಬ್ಬ ನಟನೂ ಅತ್ಯಂತ ಸೃಜನಾತ್ಮಕ ನಟನೆಯಿಂದ ಪಾತ್ರಗಳಿಗೆ ಜೀವ ತುಂಬಿದ್ದಾರೆ.

ಹಿಮಾನಿ ಫಿಲಂಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಕಲ್ಜಿಗ ಚಿತ್ರವನ್ನು ಸುಮನ್ ಸುವರ್ಣ ನಿರ್ದೇಶನ ಮಾಡಿದ್ದಾರೆ . ಶರತ್ ಕುಮಾರ್ ಎ.ಕೆ ನಿರ್ಮಾಪಕರಾಗಿದ್ದಾರೆ. ಕಲ್ಜಿಗದ ಕಥೆ ಚಿತ್ರಕಥೆ ಸಂಭಾಷಣೆಯನ್ನು ಕೂಡ ನಿರ್ದೇಶಕರೇ ಬರೆದಿದ್ದಾರೆ. ವಿಶೇಷವೆಂದರೆ, ಬಹು ಕಾಲದ ನಂತರ ನಾದಬ್ರಹ್ಮ ಹಂಸಲೇಖ ಈ ಸಿನಿಮಾ ಮೂಲಕ ಸಂಗೀತ ನಿರ್ದೇಶನಕ್ಕೆ ಮತ್ತೆ ಮರಳಿದ್ದಾರೆ.

ಇನ್ನುಳಿದಂತೆ ಗಿರ್ಗಿಟ್, ಸರ್ಕಸ್, ಗಮ್ಜಾಲ್ ಮುಂತಾದ ಚಿತ್ರಗಳಲ್ಲಿ ನಿರ್ದೇಶನ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಸುಮನ್ ಸುವರ್ಣ `ಕಲ್ಜಿಗ’ದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.

ತುಳು ಚಿತ್ರರಂಗದಲ್ಲಿ “ಕಿಂಗ್ ಆಫ್ ಆಕ್ಷನ್” ನಟ ಅರ್ಜುನ್ ಕಾಪಿಕಾಡ್ ಈ ಚಿತ್ರದ ನಾಯಕನಾದರೆ. ಅಪ್ಪಟ ಕನ್ನಡತಿ ಸುಶ್ಮಿತಾ ಭಟ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಎಸ್. ಕೆ ಗ್ರೂಪ್ ಎಂಬ ಮಾರ್ಕೆಟಿಂಗ್ ಸಂಸ್ಥೆಯ ಮಾಲೀಕ ಶರತ್ ಕುಮಾರ್ ಎ.ಕೆ ಈ ಚಿತ್ರದ ನಿರ್ಮಾಪಕ.

ಪ್ರಸಾದ್ ಕೆ ಶೆಟ್ಟಿಯವರ ಹಿನ್ನೆಲೆ ಸಂಗೀತ ಚಿತ್ರದ ವೈಶಿಷ್ಟ್ಯ . ಮಂಗಳೂರು , ಉಡುಪಿ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಗೋಪಿನಾಥ್ ಭಟ್ , ಜ್ಯೋತಿಷ್ ಶೆಟ್ಟಿ , ಮಾನಸಿ ಸುಧೀರ್ , ವಿಜಯ್ ಶೋಭರಾಜ್ ಪಾವೂರ್ , ಶ್ಲಾಘಾ ಸಾಲಿಗ್ರಾಮ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ .

ಸಚಿನ್ ಶೆಟ್ಟಿ ಛಾಯಾಗ್ರಹಣ , ಯಶ್ವಿನ್ ಕೆ ಶೆಟ್ಟಿಗಾರ್ ಸಂಕಲನ ಈ ಚಿತ್ರಕ್ಕಿದೆ. ಕಾಂತಾರ ಖ್ಯಾತಿಯ ಸನೀಲ್ ಗುರು ಕ್ರಿಯೇಟಿವ್ ಹೆಡ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ರಾಧಾಕೃಷ್ಣ ಮಾಣಿಲ , ಪ್ರೊಡಕ್ಷನ್ ಮ್ಯಾನೇಜರ್ ಆಗಿ ಸಂದೀಪ್ ಶೆಟ್ಟಿ `ಕಲ್ಜಿಗಕ್ಕೆ ಕೈ ಜೋಡಿಸಿದ್ದಾರೆ. ಒಟ್ಟಾರೆಯಾಗಿ ಪ್ಯಾಮಿಲಿ ಜೊತೆಯಾಗಿ ನೋಡಬಹುದಾದ ಅತ್ಯುತ್ತಮ ಚಿತ್ರಗಳಲ್ಲಿ ಕಲ್ಜಿಗವೂ ಒಂದು ಎನ್ನುವುದರಲ್ಲಿ ಎರಡು ಮಾತಿಲ್ಲ.

error: