April 5, 2025

Bhavana Tv

Its Your Channel

ಎರಡನೇ ಹೈಟೆಕ್ ಗಂಟಲು ದ್ರವದ ಮಾದರಿಯ ಪರೀಕ್ಷಾ ಸಂಗ್ರಹಾಗಾರದ ಲೋಕಾರ್ಪಣೆ ಮಾಡಿದ ತಹಶೀಲ್ದಾರ್ ಎಂ.ಶಿವಮೂರ್ತಿ .

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಎರಡನೇ ಹೈಟೆಕ್ ಗಂಟಲು ದ್ರವದ ಮಾದರಿಯ ಪರೀಕ್ಷಾ ಸಂಗ್ರಹಾಗಾರದ ಲೋಕಾರ್ಪಣೆ ಮಾಡಿದ ತಹಶೀಲ್ದಾರ್ ಎಂ.ಶಿವಮೂರ್ತಿ. ರಾಜ್ಯದ ರಾಜಧಾನಿಯಾದ ಬೆಂಗಳೂರು ಸೇರಿದಂತೆ ನಾಡಿನ ವಿವಿಧ ಭಾಗಗಳಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯಾದರೂ ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಕೊರೋನಾ ಪ್ರಭಾವ ಕಡಿಮೆಯಾಗುತ್ತಿದೆ. ಜಿಲ್ಲೆ ಸೇರಿದಂತೆ ಹೊರ ಭಾಗದ ಜನರಿಗೆ ಇದ್ದ ಕೆ.ಆರ್.ಪೇಟೆ ಕೊರೋನಾ ಆತಂಕ ಕಡಿಮೆಯಾಗುತ್ತಿದೆ. ಆದರೂ ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸುತ್ತಿರುವ ಜನರು ತಾವು ಇದ್ದಲ್ಲಿಯೇ ಇರಬೇಕು. ಸಧ್ಯಕ್ಕೆ ಕೆ.ಆರ್.ಪೇಟೆಗೆ ಬರಬಾರದು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು. ಕೈಗಳನ್ನು ಸ್ಯಾನಿಟೈಸರ್ ಇಲ್ಲವೇ ಸೋಪಿನಿಂದ ತೊಳೆದುಕೊಂಡು ಮುಖಕ್ಕೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು..ವಯಕ್ತಿಕ ಸ್ವಚ್ಚತೆ ಹಾಗೂ ಆರೋಗ್ಯದ ಕಡೆ ಒತ್ತು ನೀಡಬೇಕು. ಕುಡಿಯಲು ಬಿಸಿ ನೀರನ್ನು ಬಳಸಬೇಕು ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಮನವಿ ಮಾಡಿದರು.

ಕಿಯೋಸ್ಕ್ ಗಂಟಲು ದ್ರವದ ಮಾದರಿ ಸಂಗ್ರಹಣಾ ಪರೀಕ್ಷಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಿವಪ್ಪ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಿವಮ್ಮ, ಹಿರಿಯ ಆರೋಗ್ಯ ಪರಿವೀಕ್ಷಕ ಶೀಳನೆರೆ ಸತೀಶ್, ಹಿರಿಯ ಶುಷ್ರೂಶಕಿ ಸೀತಮ್ಮ, ಆರೋಗ್ಯ ಕಾರ್ಯಕರ್ತೆಯರು, ತಜ್ಞವೈದ್ಯರು ಹಾಗೂ ಆಶಾ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…

ವರದಿ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ ….

error: