ಕೃಷ್ಣರಾಜಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಗಂಜಿಗೆರೆಕೊಪ್ಪಲು ಗ್ರಾಮದ ದೇವಿಕೆರೆಯ ಹೂಳೆತ್ತುವ ಕಾರ್ಯಕ್ಕೆ ತಹಶೀಲ್ದಾರ್ ಎಂ. ಶಿವಮೂರ್ತಿ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಪಿ.ಗಂಗಾಧರ ರೈ ಭೂಮಿಪೂಜೆ ಮಾಡಿ ಚಾಲನೆ ನೀಡಿದರು …
ನಮ್ಮೂರು ನಮ್ಮಕೆರೆ ಕಾರ್ಯಕ್ರಮದ ಅಡಿಯಲ್ಲಿ ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯದಾದ್ಯಂತ ಕೆರೆಗಳ ಹೂಳನ್ನು ತೆಗೆಸಿ ಜಲಸಾಕ್ಷರತೆಯ ಬಗ್ಗೆ ಗ್ರಾಮೀಣ ಜನರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಧರ್ಮಸ್ಥಳ ಸಂಸ್ಥೆಯು ಮಾಡುತ್ತಿದೆ ಎಂದು ಹೇಳಿದ ಗಂಗಾಧರ ರೈ ಮಳೆಯ ನೀರು ಕೆರೆಯಲ್ಲಿ ನಿಂತರೆ ನೀರಿನ ಮರುಪೂರಣವಾಗುವ ಜೊತೆಗೆ ಅಂತರ್ಜಲದ ಮಟ್ಟ ಹೆಚ್ಚಾಗುತ್ತದೆ. ಆದ್ದರಿಂದ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು…
ತಹಶೀಲ್ದಾರ್ ಎಂ.ಶಿವಮೂರ್ತಿ, ರೈತಮುಖಂಡ ಮುದುಗೆರೆ ರಾಜೇಗೌಡ ಕಾರ್ಯಕ್ರಮದಲ್ಲಿ ಮಾತನಾಡಿದರು…
ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಗಾಯತ್ರಿ, ತಾಲ್ಲೂಕು ಪಂಚಾಯತ ಅಧ್ಯಕ್ಷೆ ಜಯಲಕ್ಷ್ಮೀ, ಗಂಜಿಗೆರೆ ಗ್ರಾ.ಪಂ ಅಧ್ಯಕ್ಷೆ ವೀರಾಜಮ್ಮ, ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗೇಗೌಡ, ಗ್ರಾ.ಪಂ ಸದಸ್ಯ ರೇವಣ್ಣ, ರಮೇಶ್, ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ವಿಜಯಕುಮಾರ್ ಸುವರ್ಣ, ತಾಲ್ಲೂಕು ಯೋಜನಾಧಿಕಾರಿ ಮಮತಾಶೆಟ್ಟಿ ಸೇರಿದಂತೆ ನೂರಾರು ಗ್ರಾಮಸ್ಥರು ಕೆರೆ ಹೂಳೆತ್ತುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು….
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.