ಕೆ.ಆರ್.ಪೇಟೆ ; ನಾಡಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರವು ಯಶಸ್ವಿಯಾಗಿ ಒಂದು ವರ್ಷ ಸಂಪೂರ್ಣಗೊಳಿಸಿ, ಜನಪರವಾಗಿ ಮುನ್ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಂತ ಬಿಜೆಪಿ ಪಕ್ಷವು ಒಂದು ಕೋಟಿ ಸಸಿಗಳನ್ನು ನೆಡುವ ಅಭಿಯಾನವನ್ನು ಹಮ್ಮಿಕೊಂಡಿದ್ದು ರಾಜ್ಯದ ಪೌರಾಡಳಿತ, ರೇಷ್ಮೆ, ತೋಟಗಾರಿಕೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡರ ನೇತೃತ್ವದಲ್ಲಿ ತಾಲ್ಲೂಕಿನಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಎಂಜಿನಿಯರಿAಗ್ ಕಾಲೇಜು ಆವರಣದಲ್ಲಿ ವಿವಿಧ ಬಗೆಯ ಹೂವುಗಳು ಮತ್ತು ಹಣ್ಣಿನ ಸಸಿಗಳನ್ನು ನೆಟ್ಟು ನೀರೆರೆದರು …
ಮಾನವರಾದ ನಾವುಗಳು ಪರಿಸರದ ಜೊತೆಯಲ್ಲಿ ಅವಿನಾಭಾವ ಸಂಬAಧ ಹೊಂದಿದ್ದರೂ ಪರಿಸರದ ಮೇಲೆ ನಿರಂತರವಾಗಿ ದಬ್ಬಾಳಿಕೆ ದೌರ್ಜನ್ಯ ನಡೆಸುತ್ತಿದ್ದೇವೆ. ನಗರೀಕರಣಕ್ಕಾಗಿ ಮರಗಳನ್ನು ಕಡಿದು ಕಾಡನ್ನು ನಾಶಮಾಡುತ್ತಿರುವ ನಾವು ಕಡಿದ ಮರಗಳ ಬದಲಿಗೆ ಬೇರೆ ಗಿಡಮರಗಳನ್ನು ನೆಟ್ಟು ಪರಿಸರ ಸಮತೋಲನ ಮಾಡುವ ಕೆಲಸ ಮಾಡುತ್ತಿಲ್ಲ…ನಾವು ಉಸಿರಾಡುವ ಗಾಳಿ, ಕುಡಿಯುವ ನೀರು, ತಿನ್ನುವ ಆಹಾರವೆಲ್ಲವೂ ಕಲುಷಿತವಾಗಿ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ನಾವುಗಳು ಈಗಲಾದರೂ ಎಚ್ಚೆತ್ತುಕೊಂಡು ಪರಿಸರ ಜಾಗೃತಿಯನ್ನು ಬೆಳೆಸಿಕೊಳ್ಳದಿದ್ದರೆ ಅಪಾಯವು ಕಟ್ಟಿಟ್ಟ ಬುತ್ತಿಯಾಗಿದೆ ಎಂದು ಸಚಿವರು ಆತಂಕ ವ್ಯಕ್ತಪಡಿಸಿದರು….
ಪ್ರತಿಯೊಬ್ಬರೂ ಪರಿಸರ ಪ್ರೇಮವನ್ನು ಮೈಗೂಡಿಸಿಕೊಂಡು ಗಿಡಮರಗಳನ್ನು ನೆಟ್ಟು ಬೆಳೆಸುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು. ಮನೆಗೆರಡು ಮರ, ಊರಿಗೊಂದು ವನ ಎಂಬ ಹಿರಿಯರ ಮಾತು ಧ್ಯೇಯವಾಕ್ಯವಾಗಬೇಕು..ಮಕ್ಕಳಿಗೆ ಬಾಲ್ಯದಿಂದಲೇ ಪರಿಸರ ಹಾಗೂ ಗಿಡಮರ ಪ್ರಕೃತಿಯ ಬಗ್ಗೆ ಒಲವು ಮೂಡಿಸಬೇಕು..ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರೂ ಕನಿಷ್ಠ ಹತ್ತು ಸಸಿಗಳನ್ನು ನೆಟ್ಟು ಆರೈಕೆ ಮಾಡಿ ಬೆಳೆಸುವ ಧೀಕ್ಷೆ ತೊಡಬೇಕು ಎಂದು ಸಚಿವ ಡಾ.ನಾರಾಯಣಗೌಡ ಕರೆ ನೀಡಿದರು…
ಸಸಿ ನೆಡುವ ಕಾರ್ಯಕ್ರಮದಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಎಸ್.ಅಂಬರೀಶ್, ಕೆ.ಎಸ್.ಪ್ರಭಾಕರ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ಮುಖಂಡರಾದ ಕೆ.ವಿನೋದ್ ಕುಮಾರ್, ಕೆ.ಆರ್.ಹೇಮಂತಕುಮಾರ್, ಹನುಮಂತರಾಜ್, ತಾಲ್ಲೂಕು ವಲಯ ಅರಣ್ಯಾಧಿಕಾರಿ ಹೆಚ್.ಎಸ್.ಗಂಗಾಧರ, ತಾಲ್ಲೂಕು ಸಾಮಾಜಿಕ ವಲಯ ಅರಣ್ಯಾಧಿಕಾರಿ ಸವಿತ, ಸಚಿವರ ಆಪ್ತಸಹಾಯಕರಾದ ಪ್ರಭು, ಕಿಕ್ಕೇರಿ ಕುಮಾರ್, ತಾಲ್ಲೂಕು ಬಿಜೆಪಿ ಮಾಧ್ಯಮ ವಿಭಾಗದ ಸಂಚಾಲಕ ಸಾರಂಗಿ ಮಂಜುನಾಥಗೌಡ, ಎಂಜಿನಿಯರಿAಗ್ ಕಾಲೇಜು ಪ್ರಾಂಶುಪಾಲ ಡಾ.ಎನ್.ಎಸ್.ಸತೀಶ್ ಮತ್ತಿತರರು ಉಪಸ್ಥಿತರಿದ್ದರು…
ವರದಿ.ಡಾ.ಕೆ.ಆರ್.ನೀಲಕಂಠ .
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ