ಮಂಡ್ಯ:ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಮಾಡಿ ಸೇವಾ ನಿವೃತ್ತಿ ಹೊಂದಿದ ಹಾಗೂ ಅಂತರ ಜಿಲ್ಲೆಗೆ ವರ್ಗಾವಣೆಗೊಂಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಗ್ರಾಮ ಪಂಚಾಯತಿ ನೌಕರರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಿ ಹೃದಯಸ್ಪರ್ಶಿಯಾಗಿ ಬೀಳ್ಕೊಡುಗೆ ಮಾಡಲಾಯಿತು.
ಸೇವೆಯಿಂದ ನಿವೃತ್ತರಾದ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪುಟ್ಟಸ್ವಾಮಿಗೌಡ, ನಾಗೇಗೌಡ, ಕಾಳಾಚಾರ್ ಹಾಗೂ ಅಂತರ ಜಿಲ್ಲೆಗೆ ವರ್ಗಾವಣೆಗೊಂಡ ರಂಗಸ್ವಾಮಿ, ಮಹೇಶ್ ಮತ್ತು ದಿನೇಶ್ ಅವರನ್ನು ಕೆ.ಆರ್.ಪೇಟೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಮೌಳಿ, ತಾಲ್ಲೂಕು ಯೋಜನಾಧಿಕಾರಿ ಕೆ.ಎಸ್.ಸಂದೀಪ್ ಮತ್ತು ಸಂಘದ ಅಧ್ಯಕ್ಷರಾದ ಅರವಿಂದ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ಜಗನ್ ಶಾಲುಹೊದಿಸಿ ಸನ್ಮಾನಿಸಿ, ನೆನಪಿನ ಕಾಣಿಕೆಯ ನೀಡಿ ಗೌರವಿಸಿ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯತಿ ಇಓ ಚಂದ್ರಮೌಳಿ ಸರ್ಕಾರಿ ಕೆಲಸದಲ್ಲಿ ವರ್ಗಾವಣೆ ಪ್ರಕ್ರಿಯೆಯು ನಿರಂತರವಾಗಿದೆ. ಆದರೆ ನಾವು ಸರ್ಕಾರದ ಯೋಜನೆಯ ಫಲವನ್ನು ಅರ್ಹ ಫಲಾನುಭವಿಗಳಿಗೆ ಯಶಸ್ವಿಯಾಗಿ ತಲುಪಿಸಿದಾಗ ಆದ ಸಂತೋಷಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ.
ಕೃಷ್ಣರಾಜಪೇಟೆ ತಾಲ್ಲೂಕು ಗ್ರಾಮ ಪಂಚಾಯತಿ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಆದ್ದರಿಂದ ಪಿಡಿಓ ಗಳು ಹಾಗೂ ಸಿಬ್ಬಂಧಿಗಳು ಸೇವಾ ಮನೋಭಾವನೆಯಿಂದ ಕೆಲಸ ಮಾಡಿ ತಾಲ್ಲೂಕಿನ ಕೀರ್ತಿಯನ್ನು ಮತ್ತಷ್ಟು ಬೆಳಗಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಮೌಳಿ ಮನವಿ ಮಾಡಿ ವರ್ಗಾವಣೆಗೊಂಡವರು ಹಾಗೂ ಸೇವಾ ನಿವೃತ್ತಿಹೊಂದಿದ ಅಧಿಕಾರಿಗಳಿಗೆ ಶುಭ ಹಾರೈಸಿ ಬೀಳ್ಕೊಟ್ಟರು
ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಕೆ.ಎಸ್.ಸಂದೀಪ್, ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಅರವಿಂದ್, ಉಪಾಧ್ಯಕ್ಷ ಡಾ.ನರಸಿಂಹರಾಜು, ಪಿಡಿಓ ಗಳಾದ ದೇವೇಗೌಡ, ಯೋಗೇಶ್ ಮಾತನಾಡಿದರು…
ವರದಿ.ಡಾ.ಕೆ.ಆರ್.ನೀಲಕಂಠ . ಕೃಷ್ಣರಾಜಪೇಟೆ . ಮಂಡ್ಯ.
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ