December 22, 2024

Bhavana Tv

Its Your Channel

ರಾಜ್ಯದ ಪೌರಾಡಳಿತ, ರೇಷ್ಮೆ, ತೋಟಗಾರಿಕೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡರಿಂದ ವಿವಿಧ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಚಾಲನೆ;

ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಸೋಮನಹಳ್ಳಿ, ಆಲಂಬಾಡಿಕಾವಲು ಮತ್ತು ಅಕ್ಕಿಹೆಬ್ಬಾಳು ಗ್ರಾಮ ಪಂಚಾಯತಿ ವ್ಯಾಪ್ತಿಗಳ ಹೇಮಾವತಿ, ಕಾವೇರಿ ಮತ್ತು ಲಕ್ಷ್ಮಣ ತೀರ್ಥ ನದಿಗಳು ಒಂದಾಗಿ ಸೇರುವ ಪವಿತ್ರ ತ್ರಿವೇಣಿ ಸಂಗಮಕ್ಕೆ ಸಂಪರ್ಕ ಕಲ್ಪಿಸುವ ಎರಡೂವರೆ ಕೋಟಿ ರೂಪಾಯಿ ವೆಚ್ಚದ ಅಂಬಿಗರಹಳ್ಳಿ ಸಂಗಾಪುರ ತ್ರಿವೇಣಿ ಸಂಗಮ ಡಾಂಬರು ರಸ್ತೆ ಕಾಮಗಾರಿಗೆ ಸಚಿವ ನಾರಾಯಣಗೌಡ ಭೂಮಿಪೂಜೆ ನೆರವೇರಿಸಿದರು.

ಅಕ್ಕಿಹೆಬ್ಬಾಳು ಹೋಬಳಿ ಕೇಂದ್ರದಲ್ಲಿ ಜನಸಂಪರ್ಕ ಸಭೆಗೆ ಚಾಲನೆ ನೀಡಿ ಜನರಿಂದ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ದೊರಕಿಸಿಕೊಟ್ಟರು.

ಕೃಷ್ಣರಾಜಪೇಟೆ ತಾಲ್ಲೂಕಿನ ಸಮಗ್ರವಾದ ಅಭಿವೃದ್ಧಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ನಿಮ್ಮ ಆಶೀರ್ವಾದದಿಂದ ಶಾಸಕನಾಗಿ ಮೂರು ಪ್ರಮುಖ ಖಾತೆಗಳಿಗೆ ಸಚಿವನಾಗಿದ್ದೇನೆ.. ತಾಲ್ಲೂಕಿನ ಅಭಿವೃದ್ಧಿಗೆ ವಿಪಕ್ಷಗಳ ನಾಯಕರು ನನ್ನೊಂದಿಗೆ ಸಹಕರಿಸಬೇಕು. ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸ ಮಾಡುತ್ತಿರುವ ನನ್ನ ಬಳಿ ಎಲ್ಲಾ ಪಕ್ಷದವರೂ ಬಂದು ಕೆಲಸ ಮಾಡಿಸಿಕೊಳ್ಳಬಹುದು ಎಂದು ಹೇಳಿದರು..ತಾಲ್ಲೂಕಿನ ಅಭಿವೃದ್ಧಿಯೊಂದೇ ನನಗೆ ಮೂಲಮಂತ್ರವಾಗಿದೆ. ನನ್ನ ವಿರುದ್ಧ ಟೀಕೆ ಮಾಡುವ ಟೀಕಾಕಾರರಿಗೆ ಅಭಿವೃದ್ಧಿಯ ಮೂಲಕ ಉತ್ತರ ನೀಡುತ್ತೇನೆ ಎಂದು ಸಚಿವ ನಾರಾಯಣಗೌಡ ಗುಡುಗಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ, ತಾಪಂ ಇಓ ಚಂದ್ರಮೌಳಿ, ಲೋಕೋಪಯೋಗಿ ಇಲಾಖೆಯ ಎಇಇ ಮಹೇಶ್, ಸರ್ಕಲ್ ಇನ್ಸ್ ಪೆಕ್ಟರ್ ಸುಧಾಕರ್, ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಎಸ್.ಅಂಬರೀಶ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಎಪಿಎಂಸಿ ನಿರ್ದೇಶಕ ತರಕಾರಿ ನಾಗಣ್ಣ, ಹೊಸೂರು ಸ್ವಾಮಣ್ಣ, ಮನಮುಲ್ ನಿರ್ದೇಶಕ ಕೆ.ಜಿ.ತಮ್ಮಣ್ಣ, ಬಿಜೆಪಿ ರೈತಮೋರ್ಚಾ ಅಧ್ಯಕ್ಷ ಶಿವರಾಮೇಗೌಡ, ಎ.ಜೆ.ದಿವಾಕರ್, ರಾಮಕೃಷ್ಣೇಗೌಡ, ವಿಜಯಮ್ಮ, ಟಿ.ಅಣ್ಣಯ್ಯ ಮತ್ತಿತರರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: