ಹೊನ್ನಾವರ: ತಾಲೂಕು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಸರ್ಕಾರಿ ಶಸ್ತ್ರಚಿಕಿತ್ಸಕರಾದ ಡಾ.ಮಂಜುನಾಥ್ ಶೆಟ್ಟಿ ಶುಕ್ರವಾರ ಮಹಿಳೆ ಗರ್ಭಾಶಯದಿಂದ ಸುಮಾರು ೫ ಕಿ.ಗ್ರಾಂ ಗೆಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿ ತೆಗೆದಿದ್ದಾರೆ.
ಶಾರದಾ ನರ್ಸಿಂಗ್ ಹೋಮ್ ಕರ್ಕಿಯಲ್ಲಿ ಡಾ.ಭಾಸ್ಕರ್ ಶೆಟ್ಟಿ ಮತ್ತು ಅರಿವಳಿಕೆ ತಜ್ಞೆ ಡಾ.ಚಾಂಧಿನಿ ರಾಯ್ಕರ್ ಅವರ ಮಾರ್ಗದರ್ಶನದಲ್ಲಿ ಮದ್ರಾಸ್‌ನ ರೋಗಿಗೆ ಈ ಶಸ್ತ್ರಚಿಕಿತ್ಸೆ ನಡೆಸಲಾಯಿತು. ನನ್ನ ರೋಗಿಯು ಸಂಪೂರ್ಣವಾಗಿ ಸುರಕ್ಷಿತ ಮತ್ತು ಉತ್ತಮ ಆರೋಗ್ಯದಲ್ಲಿದ್ದಾರೆ. ಈಗ ಸುಮಾರು ೨೩ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ ಮತ್ತು ಅಂತಹ ೮೩೪ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದೇನೆ ಎಂದು ಡಾ.ಮಂಜುನಾಥ್ ಶೆಟ್ಟಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.