ಕೃಷ್ಣರಾಜಪೇಟೆ ಪಟ್ಟಣವನ್ನು ಪೈಲಟ್ ಯೋಜನೆಯ ಅಡಿಯಲ್ಲಿ ರಾಜ್ಯದಲ್ಲಿಯೇ ಮಾದರಿಯಾಗಿ ಅಭಿವೃದ್ಧಿಪಡಿಸಲು ಸಚಿವರ ಸಂಕಲ್ಪ..ಪಟ್ಟಣದ ಸಮಗ್ರವಾದ ಅಭಿವೃದ್ಧಿಗೆ ಪಕ್ಷಾತೀತವಾಗಿ ಸಹಕಾರ ನೀಡುವಂತೆ ಮನವಿ ಮಾಡಿದ ಸಚಿವ ನಾರಾಯಣಗೌಡ….
ರಾಜ್ಯದ ಪೌರಾಢಳಿತ, ರೇಷ್ಮೆ ಹಾಗೂ ತೋಟಗಾರಿಕೆ ಖಾತೆಗಳ ಸಚಿವರಾಗಿ ಇದೇ ಮೊದಲ ಬಾರಿಗೆ ಕೃಷ್ಣರಾಜಪೇಟೆ ಪುರಸಭೆಯ ಸ್ವರ್ಣಜಯಂತಿ ಶಹರಿ ರೋಜ್ಗಾರ್ ಯೋಜನಾ ಭವನದಲ್ಲಿ ಪುರಸಭೆಯ ಸದಸ್ಯರ ಸಭೆ ನಡೆಸಿದ ಸಚಿವರು ಪಟ್ಟಣದ ಪುರಸಭೆಯ ಎಲ್ಲಾ 23ವಾರ್ಡುಗಳಲ್ಲಿಯೂ ಪಕ್ಷಾತೀತವಾಗಿ ಅಭಿವೃದ್ಧಿಪಡಿಸಲು ನಾನು ಬದ್ಧನಾಗಿದ್ದೇನೆ. ಖುದ್ದು ಜಿಲ್ಲಾಧಿಕಾರಿಗಳೇ ವಾರಕ್ಕೊಮ್ಮೆ ಪುರಸಭೆ ಕಾರ್ಯಾಲಯಕ್ಕೆ ಆಗಮಿಸಿ ಸಭೆ ನಡೆಸಿ ಅಭಿವೃದ್ಧಿಗೆ ಒತ್ತು ನೀಡಲಿದ್ದಾರೆ. ಪೈಲಟ್ ಯೋಜನೆಯ ಅಡಿಯಲ್ಲಿ ಕೆ.ಆರ್.ಪೇಟೆಯನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮಾದರಿಯಲ್ಲಿ ಪಟ್ಟಣವನ್ನು ಅಭಿವೃದ್ಧಿಪಡಿಸಿ ಇದೇ ಮಾದರಿಯನ್ನು ರಾಜ್ಯದಾದ್ಯಂತ ವಿಸ್ತರಿಸುವುದಾಗಿ ಘೋಷಿಸಿದರು….
ಇದೇ ಸಂದರ್ಭದಲ್ಲಿ ಪುರಸಭೆಯ ವತಿಯಿಂದ ಮುಖ್ಯಾಧಿಕಾರಿ ಸತೀಶ್ ಕುಮಾರ್, ಆಡಳಿತಾಧಿಕಾರಿ ಶೈಲಜಾ ಹಾಗೂ ಪುರಸಭೆ ಸದಸ್ಯರು ಗಜರಾಜ ಆನೆಯ ಪುತ್ಥಳಿಯನ್ನು ನೀಡಿ ಹೃದಯಸ್ಪರ್ಶಿಯಾಗಿ ತವರಿನ ಪೌರಸನ್ಮಾನ ನೀಡಿ ಗೌರವಿಸಿದರು …
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ನರಸಿಂಹಮೂರ್ತಿ, ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಜು, ಪುರಸಭೆಯ ಹಿರಿಯ ಸದಸ್ಯರಾದ ಕೆ.ಸಿ.ಮಂಜುನಾಥ್, ಡಿ.ಪ್ರೇಮಕುಮಾರ್, ಕೆ.ಆರ್.ರವೀಂದ್ರಬಾಬು, ಕೆ.ಎಸ್.ಪ್ರಮೋದ್, ಹೆಚ್.ಆರ್.ಲೋಕೇಶ್, ಕೆ.ಎಸ್.ಸಂತೋಷ್ ಮತ್ತಿತರರು ಪಟ್ಟಣದ ಅಭಿವೃದ್ಧಿಗೆ ಪೂರಕವಾದ ಸಲಹೆ ಸೂಚನೆಗಳನ್ನು ನೀಡಿದರು…
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.