December 22, 2024

Bhavana Tv

Its Your Channel

ಮುಖ್ಯ ಮಂತ್ರಿಗಳಾದ ಯಡಿಯೂರಪ್ಪ ಅವರ 78ನೇ ಹುಟ್ಟಿದ ಹಬ್ಬದ ಅಂಗವಾಗಿ ಸಚಿವ ನಾರಾಯಣಗೌಡ ಅವರಿಂದ ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣುಹಂಫಲು ವಿತರಣೆ …..

ಕೃಷ್ಣರಾಜಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಸಚಿವರಾದ ಡಾ.ನಾರಾಯಣಗೌಡ ಅವರು ನಾಡಿನ ಮುಖ್ಯಮಂತ್ರಿಗಳಾದ ತಾಲ್ಲೂಕಿನ ಸುಪುತ್ರ ಬಿ.ಎಸ್.ಯಡಿಯೂರಪ್ಪ ಅವರ 78ನೇ ಹುಟ್ಟು ಹಬ್ಬದ ಅಂಗವಾಗಿ ಹಣ್ಣುಹಂಪಲು ವಿತರಿಸಿ ರೋಗಿಗಳು ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿ ರಾಜ್ಯದ ಸಮಗ್ರವಾದ ಅಭಿವೃದ್ಧಿಗೆ ಕಟಿಬದ್ಧವಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಾಯಿ ಭುವನೇಶ್ವರಿಯು ಹೆಚ್ಚಿನ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದರು….

ಈ ಸಂದರ್ಭದಲ್ಲಿ ದುಂಡಶೆಟ್ಟಿಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಸಚಿವರನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹೆಚ್.ಟಿ.ಹರೀಶ್ ಸನ್ಮಾನಿಸಿ ಗೌರವಿಸಿದರು… ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಪಂ ಮಾಜಿ ಉಪಾಧ್ಯಕ್ಷ ಎಸ್.ಅಂಬರೀಶ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು….

error: