April 30, 2024

Bhavana Tv

Its Your Channel

ಕೆ.ಆರ್.ಪೇಟೆ ಪುರಸಭೆ ಅಧ್ಯಕ್ಷರಾಗಿ ಮಹದೇವಿನಂಜುoಡ, ಉಪಾಧ್ಯಕ್ಷೆ ಗಾಯತ್ರಿ ಆಯ್ಕೆ ಕ್ರಮಬದ್ಧ- ರಾಜ್ಯ ಉಚ್ಛ ನ್ಯಾಯಾಲಯದ ತೀರ್ಪು.

ಬಿಜೆಪಿ ಮಡಿಲಿಗೆ ಒಲಿದ ಪುರಸಭೆ ಆಡಳಿತ.. ಬಿಜೆಪಿ ಬೆಂಬಲಿತ ಸದಸ್ಯರ ಸ್ವಾಗತ, ವಿಜಯೋತ್ಸವ ಆಚರಣೆ.

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿಯು ಈ ಹಿಂದೆ ನಿಗಧಿಯಾಗಿದ್ದಂತೆ ಪರಿಶಿಷ್ಠ ವರ್ಗಕ್ಕೆ ಅಧ್ಯಕ್ಷ ಸ್ಥಾನ ಹಾಗೂ ಹಿಂದುಳಿದ ವರ್ಗ ಎ ಮಹಿಳಾ ಮೀಸಲಾತಿಗೆ ಉಪಾಧ್ಯಕ್ಷ ಸ್ಥಾನವು ನಿಗಧಿಯಾಗಿ ಅಧ್ಯಕ್ಷ-ಉಪಾಧ್ಯಕ್ಷರಾಗಿ ಮಹಾದೇವಿನಂಜುAಡ ಮತ್ತು ಗಾಯತ್ರಿ ಅವಿರೋಧವಾಗಿ ಆಯ್ಕೆಯಾಗಿದ್ದರೂ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಹಿನ್ನೆಲೆಯಲ್ಲಿ ಅಧಿಕೃತವಾಗಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಆಯ್ಕೆ ಮಾಡದೇ ಫಲಿತಾಂಶವನ್ನು ತಡೆಹಿಡಿಯಲಾಗಿತ್ತು. ಇಂದು ರಾಜ್ಯ ಉಚ್ಛ ನ್ಯಾಯಾಲಯವು ೨೦೨೦ರ ಅಕ್ಟೋಬರ್ ೩೧ರಂದು ಈ ಹಿಂದೆ ನಿಗದಿಯಾಗಿದ್ದಂತೆ ನಡೆದಿರುವ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯು ಕ್ರಮಬದ್ಧವಾಗಿದೆ ಎಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅವರು ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆ ಮಾಡುವುದು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಪುರಸಭೆ ಸದಸ್ಯರು ವಿಜಯೋತ್ಸವ ಆಚರಿಸಿ ರಾಜ್ಯ ಉಚ್ಛ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದಾರೆ …

ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಕ್ಷೇತ್ರದ ಶಾಸಕರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅವರು ಪುರಸಭೆಯ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಠವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಹಿಂದುಳಿದ ಎ ವರ್ಗಕ್ಕೆ ಮೀಸಲು ನಿಗದಿಗೊಳಿಸಿ ಚುನಾವಣೆಯನ್ನೂ ಯಶಸ್ವಿಯಾಗಿ ಮುಗಿಸಿ ಅವಿರೋಧವಾಗಿ ಆಯ್ಕೆಯಾಗುವಂತೆ ನೋಡಿಕೊಂಡಿದ್ದರು..ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧವಾಗಿ ಆಯ್ಕೆಯಾಗಿದ್ದರೂ ೬ತಿಂಗಳುಗಳಿAದ ಫಲಿತಾಂಶ ಪ್ರಕಟವಾಗದೆ ತಡೆಹಿಡಿಯಲಾಗಿತ್ತು. ಇಂದು ರಾಜ್ಯ ಉಚ್ಛ ನ್ಯಾಯಾಲಯವು ಅಧ್ಯಕ್ಷ ಉಪಾಧ್ಯಕ್ಷರ ಘೋಷಣೆಗೆ ಇದ್ದ ತಡೆಯನ್ನು ನಿವಾರಣೆ ಮಾಡಿರುವುದು ಸಾಮಾಜಿಕ ನ್ಯಾಯಕ್ಕೆ, ಸಚಿವ ನಾರಾಯಣಗೌಡರಿಗೆ ಸಿಕ್ಕ ಗೆಲುವಾಗಿದೆ ಎಂದು ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಕಾರಿಗನಹಳ್ಳಿ ಕುಮಾರ್ ಸಂತಸ ವ್ಯಕ್ತಪಡಿಸಿದ್ದು ಸಾಮಾಜಿಕ ನ್ಯಾಯದ ಹರಿಕಾರರಾದ ಸಚಿವ ನಾರಾಯಣಗೌಡ ಅವರನ್ನು ಅಭಿನಂದಿಸಿದ್ದಾರೆ…

ವಿಜಯೋತ್ಸವದಲ್ಲಿ ಪುರಸಭೆ ಸದಸ್ಯರಾದ ಶುಭಾಗಿರೀಶ್, ಶೋಭಾದಿನೇಶ್, ಕಲ್ಪನಾದೇವರಾಜು, ಹೆಚ್.ಆರ್.ಲೋಕೇಶ್, ಕೆ.ಎಸ್.ಪ್ರಮೋದ್, ಪದ್ಮರಾಜು, ಮಹಾದೇವಿನಂಜುAಡ, ಸಚಿವರ ಆಪ್ತಸಹಾಯಕರಾದ ದಯಾನಂದ, ಬಿಜೆಪಿ ಮುಖಂಡರಾದ ಅರುಣಕುಮಾರ್, ಮೋದೂರುಮಂಜು, ಶೀಳನೆರೆ ಭರತ್, ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ರವಿಶಿವಕುಮಾರ್, ಕೆ.ವಿನೋದ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: