September 27, 2021

Bhavana Tv

Its Your Channel

ನವಿಲು ತೀರ್ಥ ಜಲಾಶಯಕ್ಕೆ ಹೆಚ್ಚಿನ ನೀರು ಬಿಡುಗಡೆ, ಮಲಪ್ರಭಾ ನದಿ ದಡದ ಜನರು ಸುರಕ್ಷಿತ ತಾಣಗಳಿಗೆ ತೆರಳಲು ಮನವಿ

ನವಿಲು ತೀರ್ಥ ಜಲಾಶಯಕ್ಕೆ ಹೆಚ್ಚಿನ ನೀರು ಬಿಡುಗಡೆ ಮಲಪ್ರಭಾ ನದಿ ದಡದ ಜನರು ಸುರಕ್ಷಿತ ತಾಣಗಳಿಗೆ ತೆರಳಲು ತಮ್ಮ ಮತಕ್ಷೇತ್ರದ ಜನರಿಗೆ ಮನವಿ ಮಾಡಿದ್ದಾರೆ.

ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಯ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವಂತೆ ಬಾದಾಮಿ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಮುಖ್ಯಮಂತ್ರಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವುದರಿಂದ ಬಾದಾಮಿ ಕ್ಷೇತ್ರದ ಕೆರೆಗಳು ಭರ್ತಿಯಾಗಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುತ್ತದೆ. ಜಾನುವಾರುಗಳಿಗೂ ಅನುಕೂಲ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಸಂಬAಧ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಆದಿತ್ಯ ಆಮ್ಲನ್ ಬಿಸ್ವಾಸ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು, ಕಾಲುವೆಗಳಿಗೆ ನೀರು ಹರಿಸುವಂತೆ ತಿಳಿಸಿದರು.

ನವಿಲುತೀರ್ಥ ಅಣೆಕಟ್ಟೆಯಿಂದ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ.

ಆದ್ದರಿಂದ ನದಿ ದಡದ ಗ್ರಾಮಗಳ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ತಾಣದಲ್ಲಿರಬೇಕು ಎಂದು ಸಿದ್ದರಾಮಯ್ಯ ತಮ್ಮ ಮತಕ್ಷೇತ್ರದ ಜನರಿಗೆ ಅವರು ಮನವಿ ಮಾಡಿದ್ದಾರೆ.

ವರದಿ:- ರಾಜೇಶ್.ಎಸ್.ದೇಸಾಯಿ ಬಾದಾಮಿ

error: