December 21, 2024

Bhavana Tv

Its Your Channel

ಸಾವಳಗಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸಾವಳಗಿ: ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸಾವಳಗಿ ಮತ್ತು ಪಾಯೂಸ ಮೇಡಿಲಿಂಕ್ಸ ಪ್ರಾ.ಲಿ ಜಯಸಿಂಗಪುರ ಇವರ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದಾರೆ.

ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣೆ, ಹೃದಯ ಸಂಬAಧಿ ಖಾಯಿಲೆ, ಮೂತಿಬಿಂದು ಶಸ್ತ್ರಚಿಕಿತ್ಸೆ ಮತ್ತು ಕನ್ನಡಕವನ್ನು ಹಾಗೂ ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ಮತ್ತು ಔಷಧಿಗಳನ್ನು ನೀಡಲಾಗುವುದು ಎಂದು ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಎಂ ಎಸ್ ಜಾಧವ್ ಅವರು ಹೇಳಿದರು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀಕಾಂತ ಗೌಳಿ ಸದಸ್ಯರಾದ ಬಸವರಾಜ ಪರಮಗೂಂಡ ಸೇರಿದಂತೆ ಸಿಬ್ಬಂದಿಗಳು ಇದ್ದರು.
ವರದಿ ಕಿರಣ ಸೂರಗೂಂಡ ಸಾವಳಗಿ

error: