ಸಾವಳಗಿ: ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಸರಣಿ ಕಳ್ಳತನ ಸೋಮವಾರ ರಾತ್ರಿ ನಡೆದಿದೆ. ಕಳ್ಳರ ಗುಂಪೊAದು ನಿನ್ನೆ ಸಾವಳಗಿ ಗ್ರಾಮವನ್ನು ಟಾರ್ಗೆಟ್ ಮಾಡಿಕೊಂಡು ಗ್ರಾಮದಲ್ಲಿನ ದುರ್ಗಾದೇವಿ ದೇವಸ್ಥಾನ ಹಾಗೂ ಸುಮಾರು 3-4 ಮನೆಗಳಲ್ಲಿ ಕಳ್ಳರು ತಮ್ಮ ಕೈ ಚಳಕವನ್ನು ತೋರಿಸಿ ಮನೆಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲಿ ಮಾಡಿ ಕೈಗೆ ಸಿಕ್ಕ ಹಣ ಮತ್ತು ಒಡವೆಗಳನ್ನು ಕದ್ದುಕೊಂಡು ಪರಾರಿಯಾಗಿದ್ದಾರೆ.
ದುರ್ಗಾದೇವಿ ದೇವಸ್ಥಾನದಲ್ಲಿ ಇದ್ದ ದೇವಿಯ ಸುಮಾರು 31.75 ತೊಲೆ ಬಂಗಾರದ ಆಭರಣಗಳು ಹಾಗೂ ಬೆಳ್ಳಿಯ 45 ತೊಲೆ ಆಭರಣಗಳನ್ನು ಕಳ್ಳರು ಕದ್ದುಕೂಂಡು ಹೋಗಿರುವ ಘಟನೆ ಸಾವಳಗಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಸಾವಳಗಿ ಠಾಣೆಯ ಪಿಎಸ್ಐ ಸಚಿನ ಆಲಮೇಲಕರ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಕ್ಕದ ನೆರೆಯ ತಾಲ್ಲೂಕು ಅಥಣಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಒಂದಾದ ನಂತರ ಒಂದು ಇಂತಹ ಪ್ರಕರಣಗಳನ್ನು ಸಾರ್ವಜನಿಕರು ಕೇಳುತ್ತಿದ್ದರು ಈಗ ತಮ್ಮ ಗ್ರಾಮದಲ್ಲಿ ಸರಣಿ ಕಳ್ಳತನವಾಗಿದ್ದು ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಪೋಲಿಸ ಇಲಾಖೆ ಕಳ್ಳರನ್ನು ಬಂಧಿಸಲು ಆದಷ್ಟು ಬೇಗ ಪ್ರತ್ಯೇಕ ತಂಡವನ್ನು ರಚಿಸಿ ಈ ಪ್ರಕರಣವನ್ನು ಅತಿ ಸೂಕ್ಷ್ಮವಾಗಿ ಪರಿಗಣಿಸಿ ಕಳ್ಳರನ್ನು ಬಂಧಿಸಬೇಕೆAದು ಗ್ರಾಮಸ್ಥರ ಮನವಿಯಾಗಿದೆ.
ವರದಿ ಕಿರಣ ಸೂರಗೂಂಡ ಸಾವಳಗಿ
More Stories
ಹೆಜ್ಜೆ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗುರುವಂದನಾ ಸಮಾರಂಭ
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಕೆಎಚ್ ಡಿ ಸಿ ಇಲಕಲ್ ಉಪಕೇಂದ್ರ ಕಮತಗಿ ಯಲ್ಲಿ ನೇಕಾರರಿಂದ ಪ್ರತಿಭಟನೆ
ಮೂರುದಿನಗಳ ಪೌರತ್ವ ತರಬೇತಿ ಶಿಬಿರಕ್ಕೆ ಚಾಲನೆ