May 8, 2024

Bhavana Tv

Its Your Channel

ಕಮತಗಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 131 ಜಯಂತಿ ಆಚರಣೆ

ಬಾಗಲಕೋಟೆ ಜಿಲ್ಲೆಯ ಕಮತಗಿ ಪಟ್ಟಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು. ಅಂಬೇಡ್ಕರ್ ಅವರ ಭಾವಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ನಂತರ ಎಚ್ ಎನ್ ಎಸ್ ಕೆ ಚಿತ್ರಮಂದಿರದಲ್ಲಿ ನಡೆದ ಸಮಾರಂಭವನ್ನು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಗಂಗೂಬಾಯಿ ಮೇಟಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕಮತಗಿ ಪಟ್ಟಣ ಪಂಚಾಯತ್ ಸರ್ವ ಸದಸ್ಯರಿಗೆ, ಎಸ್ಸಿ,ಎಸ್ಟಿ, ಸಮಾಜದ ಸಾಧಕರಿಗೆ, ನಿವೃತ್ತ ನೌಕರರಿಗೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್ಸಿ-ಎಸ್ಟಿ ಸಮುದಾಯದ ವಿವಿಧ ಪಕ್ಷಗಳ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ :-ಮಾಂತೇಶ ಕುರಿ

error: