December 21, 2024

Bhavana Tv

Its Your Channel

ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದಲ್ಲಿ ಇಂದು ನಿಡಗುಂದಿಯ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ನೂತನ 4ನೇ ಶಾಖೆಯನ್ನು ಕಮತಗಿ ಕೋಟೆಕಲ್ ಸಂಸ್ಥಾನ ಮಠದ ಶ್ರೀ ಹೊಳೆ ಹುಚ್ಚೇಶ್ವರ ಮಹಾಸ್ವಾಮಿಗಳು ಉದ್ಘಾಟಿಸಿದರು.

ಪಟ್ಟಣದ ದೇವೇಂದ್ರಪ್ಪ ಬಂಡಿ ಇವರ ಮಳಿಗೆಯಲ್ಲಿ ನೂತನ ಶಾಖೆಗೆ ಶ್ರೀಗಳು ಚಾಲನೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶಾರದಾ ದುಂಡಪ್ಪ ಪಂಕಿ ವಹಿಸಿದ್ದರು. ವಿಶೇಷ ಆಮಂತ್ರಿತರಾಗಿ ಬಸವಣ್ಣಮ್ಮ ತಾಯಿ ಬಸರಕೋಡ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವರದಿ ನಿಂಗಪ್ಪ ಕಡ್ಲಿಮಟ್ಟಿ

error: