ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಪಟ್ಟಣ ಪಂಚಾಯತ ಸಭಾಂಗಣದಲ್ಲಿ 11ನೇ ವರ್ಷದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು ಈ ಸಮಾರಂಭದ ಅಧ್ಯಕ್ಷತೆಯನ್ನು ತಹಸೀಲ್ದಾರ್ ಬಸಲಿಂಗಪ್ಪ ಇವರು ವಹಿಸಿದ್ದರು
ಸಮಾರಂಭವನ್ನು ಸಸಿಗೆ ನೀರುಣಿಸುವ ಮುಖಾಂತರ ಚಾಲನೆಗೊಂಡಿತು ಹಾಗೂ ಸಮಾರಂಭದ ಅಧ್ಯಕ್ಷರನ್ನು ಕಮತಗಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುರೇಶ್ ಬಿ ಪಾಟೀಲ್ ಇವರು ಮಾಲಾರ್ಪಣೆ ಮಾಡುವ ಮುಖಾಂತರ ಬರಮಾಡಿಕೊಂಡರು ಹಾಗೂ
ಪ್ರಸ್ತಾವಿಕ ಭಾಷಣ ಮಾಡಿದ ಕಮತಗಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುರೇಶ್ ಬಿ ಪಾಟೀಲ್ ಎಲ್ಲ ಪೌರಕಾರ್ಮಿಕರಿಗೆ 11ನೇ ವರ್ಷದ ಪೌರಕಾರ್ಮಿಕರ ದಿನಾಚರಣೆ ಯ ಶುಭಾಶಯಗಳು ಕೋರಿದರು ಹಾಗೂ ಪೌರಕಾರ್ಮಿಕರಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯದ ದೃಷ್ಟಿಯಿಂದ ಪ್ರತಿಯೊಬ್ಬರನ್ನು ದೈಹಿಕ ಚಿಕಿತ್ಸೆಒಳಪಡಿಸುತ್ತೇವೆ .ಅವಶ್ಯವಿರುವ ಹ್ಯಾಂಡ್ ಗ್ಲೋವ್ಸ್ ಗಳನ್ನು ಮತ್ತು ಚಳಿಗಾಲದಲ್ಲಿ ಸ್ವೀಟರ್ ಗಳನ್ನು ಹಾಗೂ ಮಳೆಗಾಲದಲ್ಲಿ ರೇನಕೋಟುಗಳನ್ನು ಒದಗಿಸುತ್ತೇವೆ ಎಂದು ಹೇಳಿದರುಪೌರಕಾರ್ಮಿಕರನ್ನು ಸನ್ಮಾನಿಸಿ ಹಣ್ಣು ಹಂಪಲುಗಳನ್ನು ವಿತರಿಸಿದರು ಇದೇ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಕ್ರೀಡಾಕೂಟವನ್ನು ಆಯೋಜಿಸಿದ್ದರು. ಈ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಿದರು ಹಾಗೂ ಕೊನೆಯದಾಗಿ ಅಧ್ಯಕ್ಷರು ಮಾತನಾಡಿ ಎಲ್ಲ ಪೌರಕಾರ್ಮಿಕರಿಗೆ ಶುಭಾಶಯಗಳನ್ನು ಹೇಳುತ್ತಾ ಎಲ್ಲ ಪೌರಕಾರ್ಮಿಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುತ್ತಾ ಜನಸಾಮಾನ್ಯರ ಆರೋಗ್ಯವನ್ನು ಕಾಪಾಡುವ ದೇವರು ಎಂದು ಹೇಳಿದರು
ಈ ಸಂದರ್ಭದಲ್ಲಿ ಪೌರ ಸೇವಾ ನೌಕರರ ಸಂಘದ ಅಧ್ಯಕ್ಷರು ಎಸ್ ಆರ್ ಮನ್ನಿಕೇರಿ ಹಾಗೂ ಜಿಲ್ಲಾ ಪೌರ ಸೇವಾ ನೌಕರರ ಸಂಘ ಬಾಗಲಕೋಟೆ ಪ್ರಧಾನ ಕಾರ್ಯದರ್ಶಿ ಕನಕಪ್ಪ ಮರ್ಜಿ , ಪಟ್ಟಣ ಪಂಚಾಯತಿಯ ಎಲ್ಲ ಸಿಬ್ಬಂದಿ ವರ್ಗದವರು ಹಾಗೂ ಎಲ್ಲಾ ಪೌರಕಾರ್ಮಿಕರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು ಈ ಸಮಾರಂಭವನ್ನು ಸುರೇಶ ಮಾಮುನಿ ಇವರು ನಿರೂಪಿಸಿ ವಂದಿಸಿದರು
ವರದಿ ನಿಂಗಪ್ಪ ಕಡ್ಲಿಮಟ್ಟಿ
More Stories
ಹೆಜ್ಜೆ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗುರುವಂದನಾ ಸಮಾರಂಭ
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಕೆಎಚ್ ಡಿ ಸಿ ಇಲಕಲ್ ಉಪಕೇಂದ್ರ ಕಮತಗಿ ಯಲ್ಲಿ ನೇಕಾರರಿಂದ ಪ್ರತಿಭಟನೆ
ಮೂರುದಿನಗಳ ಪೌರತ್ವ ತರಬೇತಿ ಶಿಬಿರಕ್ಕೆ ಚಾಲನೆ