December 21, 2024

Bhavana Tv

Its Your Channel

ಪ್ರತಿಯೊಬ್ಬರ ಮನದಲ್ಲಿ ಕನ್ನಡದ ಕಂಪು ಪಸರಿಸಲಿ- ಸುರೇಶ ಪಾಟೀಲ

ಕಮತಗಿ: ಪರಭಾಷೆಗಳಿಗೆ ಮಾರುಹೋಗದೆ ನಮ್ಮ ನೆಲದ ಭಾಷೆಯಾದ ಕನ್ನಡಕ್ಕೆ ಹೆಚ್ಚು ಒತ್ತು ನೀಡಿ ನಮ್ಮ ಭಾಷೆಯನ್ನು ವಿಶ್ವಾದ್ಯಂತ ಹರಡಲು ಪ್ರತಿಯೊಬ್ಬರು ಶ್ರಮಿಸಬೇಕೆಂದು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಗಳಾದ ಸುರೇಶ್ ಬಿ ಪಾಟೀಲ್ ಹೇಳಿದರು.

ಪಟ್ಟಣದ ಶ್ರೀ ಹೊಳೆ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದಲ್ಲಿ ಪಟ್ಟಣ ಪಂಚಾಯತ್ ಕಾರ್ಯಾಲಯ ಹಾಗೂ ಹೊಳೆ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಯುವಕರು ಪರಭಾಷಾ ವ್ಯಾಮೋಹಕ್ಕೆ ಬಲಿಯಾಗದೆ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಪ್ರತಿಯೊಬ್ಬರು ತಮ್ಮ ನರನಾಡಿಗಳಲ್ಲಿ ಕನ್ನಡತನವನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತನ ಸಿಬ್ಬಂದಿ ವರ್ಗ, ಹುಚ್ಚೇಶ್ವರ ವಿದ್ಯಾವರ್ಧಕ ಸಂಘ ಶಿಕ್ಷಕರ ವೃಂದ, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ವರದಿ: ನಿಂಗಪ್ಪ ಬಾಗಲಕೋಟೆ

error: