ಬಾದಾಮಿ ; ಬಾದಾಮಿಯಲ್ಲಿ ಇಂದು ಜೆಡಿಸ್ ಪಕ್ಷದಿಂದ ಪೆಟ್ರೋಲ್ ಹಾಗೂ ಡಿಸೇಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಇಂದು ಜೆಡಿಎಸ್ ಪಕ್ಷದಿಂದ ಪೆಟ್ರೋಲ್ ಹಾಗೂ ಡೀಸೆಲ್ ಅಗತ್ಯ ವಸ್ತುಗಳ ಗ್ಯಾಸ್ ಸಿಲಿಂಡರ್, ವಿದ್ಯುತ್ ಬಿಲ್‌ಗಳ ಬೆಲೆ ಏರಿಕೆ ವಿರೋಧಿಸಿ ಬಾದಾಮಿ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು ಹಾಗೂ ಕೋರೋನ ಮಹಾಮಾರಿಯಿಂದ ಮೃತಪಟ್ಟ ವರಿಗೆ ೫ ಲಕ್ಷ ರೂ ಪರಿಹಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಮಾತನಾಡಿ ಬೆಲೆ ಏರಿಕೆಯಿಂದ ಬಡವರು ಜೀವನ ಮಾಡುವುದು ದುಸ್ತರವಾಗಿದೆ ಇಂಥಹ ಸರಕಾರ ನಮಗೆ ಬೇಕಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಹಣಮಂತ ಮಾವಿನಮರದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಾಲೂಕಾ ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಹಣಮಂತ ಮಾವಿನಮರದ, ಬಾದಾಮಿ ತಾಲೂಕಾಧ್ಯಕ್ಷ ಪ್ರಕಾಶ ಗಾಣಿಗೇರ, ಪಕ್ಷದ ಮುಖಂಡರಾದ ಎಂ.ಎಸ್.ಹಿರೆಹಾಳ, ಚಂದ್ರು ಸೂಡಿ, ಹಾಗೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ:- ರಾಜೇಶ್.ಎಸ್.ದೇಸಾಯಿ ಬಾದಾಮಿ
More Stories
ಏ.೨೨ ಕ್ಕೆ ಹಳಗೇರಿ- ಉಗಲವಾಟ ದಲ್ಲಿ ಬೃಹತ್ ಕಾರ್ಯಕ್ರಮ
2021-2022 ನೇ ಸಾಲಿನ ಏಳನೇ ವರ್ಗದ ವಿದ್ಯಾರ್ಥಿಗಳನ್ನು ಬೀಳ್ಕೊಡುಗೆ ಕಾರ್ಯಕ್ರಮ
ದಾಹ ತಣಿಸುವ ಆರವಟಿಗೆ ಆರಂಭಿಸಿ ಜನರ ಮೆಚ್ಚುಗೆಗೆ ಪಾತ್ರವಾದ ಯುವಾ ಬ್ರಿಗೇಡ್ ಘಟಕ