April 16, 2025

Bhavana Tv

Its Your Channel

ಶ್ರೀ ಮಹಾಕೂಟೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದು ಕರ್ನಾಟಕ ” ಎಂಬ ವಿಶೇಷ ಕಾರ್ಯಕ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ದ ಶ್ರೀ ಮಹಾಕೂಟೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ “ಓದು ಕರ್ನಾಟಕ ” ಎಂಬ ವಿಶೇಷ ಕಾರ್ಯಕ್ರಮ ನಡೆಯಿತು, ಕರೋನ ಮಹಾಮಾರಿ ಆವರಿಸಿದ ವೇಳೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳ ವಿದ್ಯಾಭ್ಯಾಸ ಕುಂಟಿತವಾಗಿದ್ದು ಅವರು ಮತ್ತೆ ಅದನ್ನು ಮೊದಲಿನ ಹಾಗೇ ಪ್ರೇರಣೆ ನೀಡಲು ಸರ್ಕಾರ ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದ ಜೊತೆಗೆ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಅಭಿನಯ ಒಪ್ಪತ್ತೇಶ್ವರ ಮಹಾಸ್ವಾಮಿಗಳು ವಹಿಸಿಕೊಂಡಿದ್ದರು. ಜೊತೆಗೆ ತಾಲೂಕಿನ ಶಿಕ್ಷಣಾಧಿಕಾರಿಗಳು, ಸಿ.ಆರ್. ಪಿ.ಗಳು ಮತ್ತು ಶಿಕ್ಷಕರು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಶಿಕ್ಷಕರಾದ ಕೊಟ್ರೇಶ್ ಅವರು ನಿರೂಪಿಸಿದರು, ಶಿಕ್ಷಕರಾದ, ಎಸ್ ಬಿ ಪವಾಡಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿದರು, ಇದೆ ಸಂದರ್ಭದಲ್ಲಿ ಶಾಲಾ ಸರ್ವ ಶಿಕ್ಷಕ ಸಿಬ್ಬಂದಿಯವರು ಉಪಸ್ಥಿತರಿದ್ದರು.

ವರದಿ:- ರಾಜೇಶ್ ಎಸ್.ದೇಸಾಯಿ ಬಾದಾಮಿ

error: