ಇಳಕಲ್: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀಮತಿ ವಿಮಲಾಬಾಯಿ ಸಾಕಾ ಬಿ ಬಿ ಎ ಹಾಗೂ ಬಿ ಸಿ ಎ ಮಹಾವಿದ್ಯಾಲಯದಲ್ಲಿ ಕೋವಿಡ್ ೧೯ ಲಸಿಕಾ ಅಭಿಯಾನ ಯಶಸ್ವಿಯಾಗಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಪ್ರಚಾರ್ಯರಾದ ಶ್ರೀ ಗಿರೀಶ ಪದಕಿ ವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು . ಆರೋಗ್ಯ ಇಲಾಖೆಯ ಸಿಬ್ಬಂದಿ ಚೇತನ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ . ಈ ಲಸಿಕೆಯ ಬಗ್ಗೆ ನಿರ್ಲಕ್ಷ್ಯ ಬೇಡ ಭಾರತದ ನಾಗರಿಕರ ಪ್ರತಿಯೊಬ್ಬರಿಗೆ ಈ ವ್ಯಾಕ್ಸಿನ್ ದೊರಕಲಿ ಎಂಬುದೇ ಸರ್ಕಾರದ ಉದ್ದೇಶವಾಗಿದೆ . ಮಾಸ್ಕ್, ಸಾಮಾಜಿಕ ಅಂತರ ಮತ್ತು ಸ್ಯಾನಿಟೈಸರ್ ಪದೇ ಪದೇ ಬಳಸಿ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಲಕ್ಷ್ಯ ವಹಿಸಬೇಕು ಮತ್ತು ಸರಕಾರದ ಆದೇಶವನ್ನು ಪಾಲಿಸಬೇಕೆಂದರು.
ಈ ಕೋವಿಡ್ ಲಸಿಕಾ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಲಸಿಕೆ ಪಡೆದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಅಕ್ಷತಾ ಸನ್ನೂರ್ ನಿರೂಪಿಸಿ, ವಂದನಾರ್ಪಣೆ ಮಾಡಿದರು .
ವರದಿ: ವಿನೋದ ಬಾರಿಗಿಡದ ಇಳಕಲ್
More Stories
ಪೂಜ್ಯರ ನೇತೃತ್ವದಲ್ಲಿ ಸಜ್ಜಲಗುಡ್ಡದಿಂದ ಗುಡದೂರಿನ ಕಡೆಗೆ ಪಾದಯಾತ್ರೆ…
ಶ್ರೀ ಲಕ್ಷ್ಮೀ ದೇವಸ್ಥಾನದ ಅಡಿಗಲ್ಲು ಪೂಜೆ
ಶಿವಯೋಗಿ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ