April 23, 2024

Bhavana Tv

Its Your Channel

ಸ್ಯಾಂಡಲ್ ವುಡ್ ಹಿರಿಯ ನಟಿ `ಅಭಿನಯ ಶಾರದೆ ಜಯಂತಿ’ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಎಂದೇ ಹೆಸರಾಗಿದ್ದ ಜಯಂತಿ ಇಂದು ನಿಧನರಾಗಿದ್ದಾರೆ. 76 ವರ್ಷ ಪ್ರಾಯದ ಜಯಂತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು.

ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿಯಾಗಿದ್ದ ಜಯಂತಿ ಅವರು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಭಾಷೆಗಳೆಲ್ಲ ಸೇರಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

1950 ರಲ್ಲಿ ಕರ್ನಾಟಕದ ಬಳ್ಳಾರಿಯಲ್ಲಿ ಜನಿಸಿದ್ದ ಜಯಂತಿಯ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಪಕರಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತಾಯಿ ಸಂತಾನಲಕ್ಷ್ಮೀ ಗೃಹಿಣಿಯಾಗಿದ್ದರು.

ಕನ್ನಡ ನಿರ್ದೇಶಕ ವೈ.ಆರ್.ಪುಟ್ಟಸ್ವಾಮಿಯವರು ಜಯಂತಿಯವರನ್ನು ತಮ್ಮ `ಜೇನುಗೂಡು’ ಚಿತ್ರದಲ್ಲಿ ನಟಿಸುವ ಅವಕಾಶ ಕೊಟ್ಟರು. ಕಮಲಾ ಕುಮಾರಿಗೆ ಜಯಂತಿ ಎಂದು ನಾಮಕರಣ ಮಾಡಿದ್ದು ಪುಟ್ಟಸ್ವಾಮಿಯವರೇ. ಜಯಂತಿಯವರು ಡಾ.ರಾಜ್ ಕುಮಾರ್ ಜೊತೆ ದಾಖಲೆಯ 45 ಚಿತ್ರಗಳಲ್ಲಿ ನಟಿಸಿದ್ದಾರೆ.

ಎಡಕಲ್ಲು ಗುಡ್ಡದ ಮೇಲೆ, ಮನಸ್ಸಿನಂತೆ ಮಾಂಗಲ್ಯ, ಧರ್ಮ ದಾರಿ ತಪ್ಪಿತ್ತು, ಮಸಣದ ಹೂವು, ಆನಂದ್, ಟುವಿ ಟುವಿ ಟುವಿ ಚಿತ್ರಗಳಿಗೆ ಜಯಂತಿ ರಾಜ್ಯ ಪ್ರಶಸ್ತಿ ಪಡೆದಿದ್ದರು.

source: ಉದಯವಾಣಿ

error: