April 19, 2024

Bhavana Tv

Its Your Channel

‘ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್’ ಇನ್ನಿಲ್ಲ

ಬೆಂಗಳೂರು: ಜಿಮ್ ಕಸರತ್ತು ನಡೆಸುತ್ತಿದ್ದಂತ ಸಂದರ್ಭದಲ್ಲಿ ಇಂದು, ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದಂತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು, ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂತಹ ಅವರು ಚಿಕಿತ್ಸೆ ಫಲಕಾರಿಯಾಗದೇ ಇನ್ನಿಲ್ಲವಾಗಿದ್ದಾರೆ.

ಇಂದು ಬೆಳಿಗ್ಗೆ 11.30ಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿ, ಖಾಸಗಿ ಕ್ಲಿನಿಕ್ ಒಂದರಲ್ಲಿ ಇಸಿಜಿ ಮಾಡಿಸಿಕೊಂಡು ಬಂದು, ವಿಕ್ರಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರಿಗೆ ಚಿಕಿತ್ಸೆ ನೀಡಿದ್ದಂತ ವೈದ್ಯರು, ಅವರ ಸ್ಥಿತಿ ಗಂಭೀರಗೊಂಡಿದೆ. ಅಂತಿಮ ಹಂತದ ಎಲ್ಲಾ ಚಿಕಿತ್ಸೆ ನಡೆಸುತ್ತಿರೋದಾಗಿ ತಿಳಿಸಿದ್ದರು.

ಈ ಎಲ್ಲಾ ಬೆಳವಣಿಗೆಯ ನಂತ್ರ, ಹೃದಯಾಘಾತಕ್ಕೆ ಒಳಗಾದಂತ ಅವರಿಗೆ ಕಡೆಯ ಕ್ಷಣದ ಎಲ್ಲಾ ರೀತಿಯ ಪ್ರಯತ್ನವನ್ನು ನಡೆಸಿದರೂ, ಚಿಕಿತ್ಸೆಗೆ ಪ್ರತಿಸ್ಪಂದಿಸದ ಕಾರಣ, ಇಂದು ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇನ್ನಿಲ್ಲವಾಗಿದ್ದಾರೆ. ಇನ್ನೂ ಪುನೀತ್‌ ರಾಜ್‌ಕುಮಾರ್‌ ಅವರು ಅಂತಿಮ ದರ್ಶನಕ್ಕಾಗಿ ಕಂಠೀರವ ಕ್ರೀಡಾಂಗಣದಲ್ಲಿ ಎಲ್ಲಾ ಸಿದ್ದತೆ ನಡೆಸಲಾಗುತ್ತಿದೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಪುನೀತ್‌ ಅವರ ಪಾರ್ಥಿವ ಶರೀರವನ್ನು ತಲುಪಲಿದ್ದು, ಇಂದು ಮತ್ತು ನಾಳೆ ಅಲ್ಲಿಯೇ ಅಭಿಮಾನಿಗಳಿಗೆ ದರ್ಶನಕ್ಕಾಗಿ ಇಡಲಾಗುವುದು ಎನ್ನಲಾಗಿದೆ.

source: Kannada News Now

error: