May 30, 2023

Bhavana Tv

Its Your Channel

ರಾಜ್ಯ ಸರ್ಕಾರದಿಂದ ಸಿಹಿಸುದ್ದಿ : 60 ವರ್ಷ ಮೇಲ್ಪಟ್ಟ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಔಷಧ.

ಬೆಂಗಳೂರು : ರಾಜ್ಯ ಸರ್ಕಾರವು 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ಬಿಪಿಎಲ್ ಕಾರ್ಡ್ ಉಳ್ಳವರಿಗೆ ಸಿಹಿಸುದ್ದಿ ನೀಡಿದ್ದು, 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಬಿಪಿಎಲ್ ಕಾರ್ಡ್ ಉಳ್ಳವರಿಗೆ ಉಚಿತ ಔಷಧ ನೀಡಲಾಗುವುದು ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಭರವಸೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ಎಲ್ಲ ಕಡೆ ಡೇಟಾ ಕಲೆಕ್ಟ್ ಮಾಡುತ್ತಿದ್ದಾರೆ. ಹಲವು ಕಡೆಗಳಲ್ಲಿ ಔಷಧ ಪೂರೈಕೆ ಸರಿಯಾಗಿ ಆಗುತ್ತಿಲ್ಲ ಎಂಬ ಆರೋಪ ಇದೆ. ಈ ಸಮಸ್ಯೆಯನ್ನು ಶೀಘ್ರದಲ್ಲಿ ಸರಿಪಡಿಸಲಾಗುವುದು. 60 ವರ್ಷ ಮೇಲ್ಪಟ್ಟ ಹಾಗೂ ಬಿಪಿಎಲ್ ಕಾರ್ಡ್ ಉಳ್ಳವರಿಗೆ ಉಚಿತ ಔಷಧ ನೀಡಲಾಗುವುದು. ಅಲ್ಲದೇ ನಗರದ ಎಲ್ಲಾ ವಾರ್ಡ್ ಗಳಲ್ಲೂ ಜನೌಷಧ ಕೇಂದ್ರ ತೆರೆಯಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ.

source: News Hunt

About Post Author

error: