March 29, 2024

Bhavana Tv

Its Your Channel

ಪ್ರತಿ ಜಿಲ್ಲೆಗೊಂದು ಐಎಸ್‌ಐ ಆಸ್ಪತ್ರೆಗೆ ಕೇಂದ್ರ ಕಾರ್ಮಿಕ ಇಲಾಖೆಯ ಸಚಿವರಾದ ಭೂಪೇಂದ್ರ ಯಾದವರಲ್ಲಿ ಸಚಿವರಾದ ಶಿವರಾಮ ಹೆಬ್ಬಾರ ಮನವಿ

ವರದಿ: ವೇಣುಗೋಪಾಲ ಮದ್ಗುಣಿ

ಬೆಂಗಳೂರು : ತುಮಕೂರಿನಲ್ಲಿ 100 ಹಾಸಿಗೆಗಳ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಮತ್ತು ಹವಾಮಾನ ಇಲಾಖೆ ಸಚಿವ ಭೂಪೇಂದ್ರ ಯಾದವ ಸೂಚನೆ ನೀಡಿದರು. ರಾಜ್ಯ ಪ್ರವಾಸ ಕೈಗೊಂಡಿದ್ದ ಸಚಿವರು, ಹಾರೋಹಳ್ಳಿ, ನರಸಾಪುರ, ದೊಮ್ಮಸಂದ್ರ ಮತ್ತು ದೊಡ್ಡಬಳ್ಳಾಪುರ ಇಎಸ್‌ಐ ಆಸ್ಪತ್ರೆಗಳ ಕಾರ್ಯವೈಖರಿ ಪರಾಮರ್ಶಿಸುತ್ತಾ ಅಧಿಕಾರಿಗಳಿಗೆ ತುಮಕೂರಿನಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರ್ತಿಸುವಂತೆ ಸೂಚಿಸುವ ಮೂಲಕ ಶ್ರಮಿಕ ವರ್ಗಕ್ಕೆ ಸಂತಸದ ಸುದ್ದಿ ನೀಡಿದರು.
ಇದೇ ವೇಳೆ ನಡೆದ ಸಭೆಯಲ್ಲಿ ಮಾತನಾಡಿದ ರಾಜ್ಯ ಕಾರ್ಮಿಕ ಇಲಾಖೆಯ ಸಚಿವ ಶಿವರಾಂ ಹೆಬ್ಬಾರ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 30 ಹಾಸಿಗೆಗಳ ಐಎಸ್‌ಐ ಆಸ್ಪತ್ರೆಗಳನ್ನು ಆರಂಭಿಸಬೇಕು ಮತ್ತು ಈ ಆಸ್ಪತ್ರೆಗಳಲ್ಲಿ ಆಯುಷ್ ವಿಭಾಗಗಳು ಇರಬೇಕು ಎಂದು ಮನವಿ ಮಾಡಿದರು.ಪ್ರಸ್ತುತ ತಾಜ್ಯದಲ್ಲಿ ಇರುವ 7 ಇಎಸ್‌ಐ ಆಸ್ಪತ್ರೆಗಳಲ್ಲಿ ಎಂ.ಐ.ಸಿ.ಯು ಘಟಕಗಳನ್ನು ಸ್ಥಾಪಿಸಬೇಕು ಮತ್ತು ರಾಜ್ಯದ ಎಲ್ಲೆಡೆಗಳಲ್ಲಿ ಇಎಸ್‌ಐ ಔಷಧಾಲಯಗಳನ್ನು ಆರಂಭಿಸಬೇಕು, ರಾಜ್ಯದ ಕೆಲವೇ ಕಡೆಗಳಲ್ಲಿ ಇರುವ ಔದ್ಯೋಗಿಕ ರೋಗ ಕೇಂದ್ರಗಳನ್ನು ಎಲ್ಲೆಡೆ ಆರಂಭಿಸಬೇಕು ಎಂದು ಮನವಿ ಮಾಡಿದರು.ಇಎಸ್‌ಐ ಸೇವೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲು ಇಎಸ್‌ಐಸಿಗಳಲ್ಲಿ ರಾಜ್ಯದ ಪ್ರತಿನಿಧಿಗಳೂ ಇರಬೇಕು ಎಂದು ಪ್ರತಿಪಾದಿಸಿದ ರಾಜ್ಯ ಸಚಿವರು, ಇದರಿಂದ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಮನ್ವಯತೆ ಹೆಚ್ಚಲಿದೆ ಎಂದು ಅಭಿಪ್ರಾಯಿಸಿದರು.
ಪ್ರಸಕ್ತ ಸಾಲಿನಲ್ಲಿ ಯೋಜನೆಗಳ ಅನುಷ್ಠಾನ ಯೋಜನೆ ಜಾರಿಗೆ 200 ಕೋಟಿ ರೂಪಾಯಿಗಳಿಗೆ ಅನುಮೋದನೆ ನೀಡುವಂತೆ ಕೇಂದ್ರ ಸಚಿವ ಯಾದವ್‌ರಲ್ಲಿ ಮನವಿ ಮಾಡಿದ ಸಚಿವ ಶಿವರಾಂ ಹೆಬ್ಬಾರ, ರಾಜ್ಯದಲ್ಲಿ ಶ್ರಮಿಕರ ಸಂಕ್ಷೇಮಕ್ಕಾಗಿ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ವಿವರಣೆ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಆರತಿ ಅಹುಜಾ, ರಾಜ್ಯ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್, ಇಲಾಖೆ ಆಯುಕ್ತ ಅಕ್ರಂ ಪಾಷ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ಗುರುಪ್ರಸಾದ್, ಇಎಸ್‌ಐ ಆಸ್ಪತ್ರೆ ಪ್ರಾದೇಶಿಕ ನಿರ್ದೇಶಕ ಸಾಹು, ಇಎಸ್‌ಐ ನಿರ್ದೇಶಕ ರವಿಕುಮಾರ್, ರಾಜಾಜಿನಗರದ ಡೀನ್, ರಾಜ್ಯ ಕಾರ್ಮಿಕ ಸಚಿವರ ಆಪ್ತ ಕಾರ್ಯದರ್ಶಿ ಮಂಜುನಾಥ ಬಳ್ಳಾರಿ ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

error: