April 19, 2024

Bhavana Tv

Its Your Channel

ಸೋಮವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ ಸಾಧ್ಯತೆ : ಸಚಿವ ಸುರೇಶ್‌ ಕುಮಾರ್‌.

ಬೆಂಗಳೂರು ; ಲಾಕ್‌ಡೌನ್‌ನಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಅಲ್ಲದೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೂ ಮುಂದೂಡಲಾಗಿತ್ತು. ಆದರೆ, ಈ ಕುರಿತು ಶಿಕ್ಷಣ ಇಲಾಖೆಯಲ್ಲಿ ಸೋಮವಾರ ಚರ್ಚೆ ನಡೆಯಲಿದೆ. ಈ ಚರ್ಚೆಯ ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಇಂಗ್ಲೀಷ್‌ ಪತ್ರಿಕೆ ಪರೀಕ್ಷೆ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ ಬೆನ್ನಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಾಹಿತಿ ನೀಡಿರುವ ಸಚಿವ ಸುರೇಶ್‌ ಕುಮಾರ್‌, “10ನೇ ತರಗತಿ ಪರೀಕ್ಷೆಗಳನ್ನು ಶೀಘ್ರದಲ್ಲಿ ನಡೆಸುವ ಸಲುವಾಗಿ ಶಿಕ್ಷಣ ಇಲಾಖೆಯಲ್ಲಿ ಚರ್ಚೆಗಳು ನಡೆಯುತ್ತಿವೆ. ಸೋಮವಾರ ಈ ಕುರಿತು ಮಹತ್ವದ ಚರ್ಚೆ ನಡೆಯಲಿದ್ದು, ಆನಂತರ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.ಇದೇ ಸಂದರ್ಭದಲ್ಲಿ ಶಾಲೆಗಳ ಆರಂಭದ ಬಗ್ಗೆಯೂ ಮಾತನಾಡಿರುವ ಅವರು, “ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬಹುದು, ಎಷ್ಟು ಶೈಕ್ಷಣಿಕ ದಿನಗಳು ಕಡಿಮೆ ಆಗುತ್ತದೆ ಎಂಬ ಬಗ್ಗೆ ಶಿಕ್ಷಣ ಇಲಾಖೆ ಅಧ್ಯಯನ ಮಾಡುತ್ತಿದೆ. ಅಲ್ಲದೆ, ತರಗತಿಗಳನ್ನು ಶಿಫ್ಟ್ ನಲ್ಲಿ‌ ನಡೆಸಬೇಕಾ ಅಥವಾ ಪರ್ಯಾಯ ವ್ಯವಸ್ಥೆ ‌ಮಾಡಬೇಕಾ? ಎಂಬ ಚರ್ಚೆಯೂ ನಡೆಯುತ್ತಿದೆ. ಸೋಮವಾರದ ವೇಳೆಗೆ ಈ ಬಗ್ಗೆ ಒಂದು ಸ್ಪಷ್ಟ ಚಿತ್ರಣ ಸಿಗಲಿದೆ.

source: NEWS HUNT

error: